ಯಾವುದೇ ಅಡೆತಡೆ ಇಲ್ಲದೆ ಯಶಸ್ವಿ ಕಂಡ ದೀಪಾಲಂಕಾರ ಮಹೋತ್ಸವದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್ ದೀಪಾಲಂಕಾರ ಹಾಗೂ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಡ್ರೋನ್ ಪ್ರದರ್ಶನ ಯಶಸ್ಸು ಕಂಡಿದೆ. ಈ ಕಾರ್ಯಕ್ರಮಗಳ ಯಶಸ್ಸಿಗೆ ಕಾರಣವಾದ ಜಿಲ್ಲಾಡಳಿತದ ಅಧಿಕಾರಿಗಳು, ವಿದ್ಯುತ್ ಗುತ್ತಿಗೆದಾರರು, ಪ್ರಾಯೋಜಕರು ಸೇರಿದಂತೆ ಪ್ರತಿಯೊಬ್ಬರಿಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್) ವತಿಯಿಂದ ಅಭಿನಂದಿಸಲಾಯಿತು.