ಎಲ್ಲೆಡೆ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಮೈಸೂರು ನಗರದ ಜೆಕೆ ಮೈದಾನ, ನಂಜುಮಳಿಗೆ, ಇಟ್ಟಿಗೆಗೂಡು, ಸರಸ್ವತಿಪುರಂ, ಪಡುವಾರಹಳ್ಳಿ, ಬಾರಕೊಪ್ಪಲು, ಚಾಮುಂಡಿಪುರಂ, ರಾಮಕೃಷ್ಣನಗರ, ಕುವೆಂಪುನಗರ, ಅಕ್ಷಯಭಂಡಾರ ಸೇರಿದಂತೆ ನಗರದ ವಿವಿಧೆಡೆ ತೆರೆದಿರುವ ಮಳಿಗೆಗಳಲ್ಲಿ ಪಟಾಕಿ ವ್ಯಾಪಾರ ಭರ್ಜರಿಯಾಗಿತ್ತು. ಅಲ್ಲದೆ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿನ ಬೃಹತ್ಪಟಾಕಿ ಮಳಿಗೆಗಳಿಗೆ ಭೇಟಿ ನೀಡಿದ ಅನೇಕರು ಲಕ್ಷಾಂತರ ರೂ. ಮೌಲ್ಯದ ಪಟಾಕಿ ಖರೀದಿಸಿದರು.