ಚಾಮುಂಡಿಬೆಟ್ಟದಲ್ಲಿರುವ ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು ಎಂಬ ಮಹಿಷ ಮಂಡಲೋತ್ಸವ ಆಚರಣಾ ಸಮಿತಿಯ ಉದ್ದೇಶ ಈಡೇರಲಿಲ್ಲ. ಮಹಿಷಾ ಮಂಡಲೋತ್ಸವವು ಕಳೆದ ಬಾರಿಯಂತೆ ಈ ಬಾರಿಯೂ ಪುರಭವನ ಆವರಣಕ್ಕೆ ಸೀಮಿತವಾಗಿ ನಡೆಯಿತು.
ರಾಜ್ಯ ಸರ್ಕಾರವು ಜಾತಿ ಗಣತಿಯನ್ನು ಶೀಘ್ರದಲ್ಲೇ ಸಚಿವ ಸಂಪುಟದ ಅನುಮೋದನೆ ಪಡೆದು ಜಾರಿಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಲವಕ್ಕೆ ಅ.3 ರಂದು ಬೆಳಗ್ಗೆ 9.15 ರಿಂದ 9.45 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಪ್ರೊ.ಹಂಪ ನಾಗರಾಜಯ್ಯ ಚಾಲನೆ ನೀಡುವರು.