ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿ ಮಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ವಿಜಯ್ ಕುಮಾರ್ ನಾಗನಾಳಸಂಶೋಧನೆಗಳಿಂದಾಗಿ ಶಿಕ್ಷಣ ಎಂಬುದು ಪ್ರಯೋಗ ಶಾಲೆಯಾಗಿ ಮಾರ್ಪಟ್ಟಿರುವುದು ವಿಪರ್ಯಾಸ. ಭೌತಿಕ ಅಭಿವೃದ್ಧಿಗೆ ಹಿಂದಿನ ಶಿಕ್ಷಣ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಿರುವ ಕಾರಣ ಮೌಲಿಕ ಜೀವನ ಅವನತಿಯ ದಾರಿ ಹಿಡಿಯುತ್ತಿದೆ. ಇಂದಿನ ಶಿಕ್ಷಣದಲ್ಲಿ ಹಣ ಗಳಿಕೆಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಿರುವುದರಿಂದ ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿದ್ದು, ಜನ್ಮಕೊಟ್ಟ ತಂದೆ ತಾಯಿಯನ್ನು ಕೂಡ ಅವಗಣನೆಗೆ ಒಳಗಾಗುತ್ತಿದ್ದಾರೆ.