ನಭದಲ್ಲಿ ನಕ್ಷತ್ರದಂತೆ ಮಿನಿ ಮಿನ ಮಿಂಚಿದ ಡ್ರೋನ್ ಗಳು; ಏಕಕಾಲದಲ್ಲಿ 3 ಸಾವಿರ ಡ್ರೋನ್ ಗಳ ಹಾರಾಟಸೌರಮಂಡಲ, ವಿಶ್ವಭೂಪಟ, ದೇಶದ ಹೆಮ್ಮೆಯ ಸೈನಿಕ, ನವಿಲು, ರಾಷ್ಟ್ರೀಯ ಪ್ರಾಣಿ ಹುಲಿ, ಡಾಲ್ಫಿನ್, ಈಗಲ್, ಸರ್ಪದ ಮೇಲೆ ಶ್ರೀಕೃಷ್ಣ ನೃತ್ಯ ಮಾಡುವುದು, ಕಾವೇರಿ ಮಾತೆ, ಲಕ್ಷ್ಮೀ, ಕರ್ನಾಟಕ ಭೂಪಟದೊಂದಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್, ಪಂಚ ಗ್ಯಾರಂಟಿ ಯೋಜನೆಗಳಿಂದ ಕೂಡಿದ್ದ ಕರ್ನಾಟಕ ಭೂಪಟ, ಅಂಬಾರಿ ಆನೆ, ನಾಡದೇವತೆ ಚಾಮುಂಡೇಶ್ವರಿ ಕಲಾಕೃತಿಗಳು ನೋಡುಗರಿಗೆ ಅದ್ಭುತ ಮನರಂಜನೆ ನೀಡಿದವು. ಡ್ರೋನ್ ಪ್ರದರ್ಶನದ ಆಕರ್ಷಣೆ ಕಣ್ತುಂಬಿಕೊಳ್ಳಲು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಜನರು ಕಿಕ್ಕಿರಿದು ತುಂಬಿದ್ದರು.