ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆನಮ್ಮ ದೇಶದ ಉದ್ದಗಲಕ್ಕೂ ಪ್ರತಿ ದಿನ, ಪ್ರತಿ ಕ್ಷಣ, ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದೊಂದು ಆಘಾತಕಾರಿ ಸಂಗತಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ, ಮಹಿಳಾ ಆಯೋಗ ರಕ್ಷಣೆಗಾಗಿ ಹಲವು ಕಾರ್ಯಕ್ರಮಗಳ ಮೂಲಕ ಯೋಜನೆ ರೂಪಿಸಿದ್ದರೂ ಕಾರ್ಯ ನಿರ್ವಹಣೆಯಲ್ಲಿ ವಿಫಲವಾಗುತ್ತಿದೆ.