2 ತಾಸು, 25 ಪ್ರಶ್ನೆ: ಸಿಎಂ ಸಿದ್ದುಗೆ ಲೋಕಾ ಗ್ರಿಲ್ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಖುದ್ದು ಲೋಕಾಯುಕ್ತ ಪೊಲೀಸರ ಕಚೇರಿಗೆ ತೆರಳಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಎರಡು ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. ಮುಖ್ಯಮಂತ್ರಿಯೊಬ್ಬರು ಪ್ರಕರಣವೊಂದರಲ್ಲಿ ಲೋಕಾಯುಕ್ತ ವಿಚಾರಣೆ ಎದುರಿಸಿದ್ದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲಾಗಿದೆ.