ಕನ್ನಡ ರಂಗಭೂಮಿಯ ವಿಶಿಷ್ಟ ಗೌರವಕ್ಕೆ ಮಣ್ಣಿನ ಗುಣ, ಜಾನಪದ ಕಾರಣ: ಮಂಡ್ಯ ರಮೇಶ್ಮೈಸೂರಿನಲ್ಲಿ ರಾಜರ ಕಾಲದಿಂದಲೂ ನಾಟಕಕ್ಕೆ ಪ್ರೋತ್ಸಾಹ ಸಿಗುತ್ತಿದೆ. ಗುಬ್ಬಿ ವೀರಣ್ಣ ಕಂಪನಿಯನ್ನು ಕರೆಸಿ, ಜಗನ್ಮೋಹನ ಅರಮನೆಯಲ್ಲಿ ರಾಜರು ನಾಟಕ ಮಾಡಿಸಿ, ಪ್ರೋತ್ಸಾಹಿಸಿದ್ದರು. ಈಗಲೂ ಕೂಡ ಒಳ್ಳೆಯ ನಾಟಕಗಳನ್ನು ಪ್ರದರ್ಶಿಸಿದರೆ ಜನ ಖಂಡಿತಾ ಬೆಂಬಲ ನೀಡುತ್ತಾರೆ. ಉತ್ತಮ ನಾಟಕಕ್ಕೆ ಸೋಲೇ ಇಲ್ಲ. ಜನ ಬಂದೇ ಬರುತ್ತಾರೆ.