ಮೂರು ವರ್ಷದಲ್ಲಿ ನಾಲ್ಕು ಸಾವಿರ ಮನೆ ನಿರ್ಮಿಸಿ ಹಂಚಿಕೆ: ಶಾಸಕ ಟಿ.ಎಸ್.ಶ್ರೀವತ್ಸಬಡವರು ಮತ್ತು ಮಧ್ಯಮ ವರ್ಗದವರು ಮನೆಗಳಲ್ಲಿ ವಾಸ ಮಾಡಬೇಕೆ ಹೊರತು ಮತ್ತೊಬ್ಬರಿಗೆ ಬಾಡಿಗೆ ನೀಡಬಾರದು. ಲಲಿತಾದ್ರಿಪುರದಲ್ಲಿ ಜಿ- ಪ್ಲಸ್ 9 ಬಹುಮಹಡಿ ಮನೆ ನಿರ್ಮಿಸುತ್ತಿದ್ದು, ಎರಡು ತಿಂಗಳೊಳಗೆ ಮತ್ತೆ 1,660 ಮನೆಗಳ ನಿರ್ಮಾಣಕ್ಕೆ ಶೀಘ್ರದಲ್ಲೇ ಕಾಮಗಾರಿ ಆರಂಭ ಮಾಡಲಾಗುವುದು. ಪ.ಜಾತಿಗೆ ಸೇರಿದ ಫಲಾನುಭವಿಗಳಿಗೆ 395 ಮನೆಗಳ ನಿರ್ವಾಣಕ್ಕೆ ಅನುದಾನ ಮೀಸಲಿಡಲಾಗಿದೆ.