ಮಾದಕ ವಸ್ತು ದುರಭ್ಯಾಸದಿಂದ ಹೊರ ಬರುವುದು ಕಷ್ಟ: ಡಿ.ನಟರಾಜುಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಹದಿಹರೆಯದ ವಯಸ್ಸಿನವರು, ವಿದ್ಯಾರ್ಥಿಗಳು ಒಳಗಾಗುತ್ತಿದ್ದು ಇದನ್ನು ತಡೆಯಲು ಸರ್ವರೂ ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು. ಮದ್ಯ, ತಂಬಾಕು, ಡ್ರಗ್ಸ್, ಗಾಂಜಾ, ಅಫೀಮು ಮತ್ತಿತರ ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನಲ್ಲಿ ಅಸ್ಪಷ್ಟತೆ ಉಂಟಾಗುವುದರಿಂದ ಮನುಷ್ಯ ತನ್ನ ಮೇಲೆ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.