ಅಭಿವೃದ್ಧಿಯ ವಿಚಾರದಲ್ಲಿ ರಾಜಕಾರಣ ಬೇಡ: ಶಾಸಕ ಜಿ.ಡಿ.ಹರೀಶ್ ಗೌಡ ತಾಕೀತುರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆಂದು ಅಭಿವೃದ್ಧಿ ಯೋಜನೆಗಳಿಗೆ ಅನುದಾನವನ್ನೇ ನೀಡುತ್ತಿಲ್ಲ. ಸಹಜವಾಗಿ ಸಿಗಬೇಕಿದ್ದ ಅನುದಾನಕ್ಕೂ ಕತ್ತರಿ ಬಿದ್ದಿದೆ. ಕಳೆದ ಎರಡು ದಿನಗಳಲ್ಲಿ ನಾನು ಸರ್ಕಾರದ ನಗರಾಭಿವೃದ್ಧಿ ಮತ್ತು ಪೌರಾಡಳಿತ ಸಚಿವ, ಅರಣ್ಯ, ಸಮಾಜಕಲ್ಯಾಣ ಮುಂತಾದ ಇಲಾಖೆ ಸಚಿವರನ್ನು ಭೇಟಿ ಮಾಡಿ ಅಭಿವೃದ್ಧಿಗಾಗಿ ಅನುದಾನ ನೀಡಬೇಕೆಂದು ಕೋರಿದ್ದೇನೆ.