ಜೂನ್ 15, 16 ರಂದು ನಂಜರಾಜ ಬಹದ್ದೂರ್ ಛತ್ರದಲ್ಲಿ ಹಲಸಿನ ಹಬ್ಬಹಲಸಿನ ಮಹತ್ವ ಸಾರುವ ಮೇಳದಲ್ಲಿ, ಕೆಂಪು, ಹಳದಿ ಮತ್ತು ಬಿಳಿ ಹಲಸಿನ ತಳಿ ಹಣ್ಣುಗಳು ತಿನ್ನಲು ಸಿಗಲಿವೆ. ಹಲಸಿನ ಐಸ್ ಕ್ರೀಂ, ಚಿಪ್ಸ, ಚಾಕೋಲೇಟ್, ಹಪ್ಪಳ, ಹಲ್ವ, ಕಬಾಬ್, ಹೋಳಿಗೆ, ವಡೆ, ದೋಸೆ , ಪಲ್ಯ , ಬಿರಿಯಾನಿಯ ಮಳಿಗೆಗಳು ಬರಲಿವೆ. ಚಿಕ್ಕನಾಯಕನಹಳ್ಳಿ, ನಾಗರಹೊಳೆ ಕಾಡು, ಕೊಳ್ಳೇಗಾಲ, ತಮಿಳುನಾಡಿನ ಪನ್ನರ್ತಿಯ ಗುಣಮಟ್ಟದ ಹಲಸಿನ ಹಣ್ಣುಗಳು ಮಾರಾಟಕ್ಕೆ ಬರಲಿವೆ.