ದೀರ್ಘ ಕಾಲದ ಶಿಕ್ಷಕರ ಸಮಸ್ಯೆ ಪರಿಹಾರಕ್ಕಾಗಿ ನನ್ನನ್ನು ಮರು ಆಯ್ಕೆ ಮಾಡಿ4 ಬಾರಿ ವಿಧಾನಪರಿಷತ್ ಸದಸ್ಯನಾಗಿ ಸೇವೆ ಸಲ್ಲಿಸಿದ್ದೇನೆ. ಈಗ 5ನೇ ಬಾರಿ ಆಯ್ಕೆಯಾಗಲು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿದ್ದೇನೆ. ಇದು ತಮಗೆ ದೊರೆತಿರುವ ಸುವರ್ಣ ಅವಕಾಶವಾಗಿದೆ. ಏಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರ, ಶಿಕ್ಷಕರು, ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ. ಹೀಗಾಗಿ, ಈಗ ತಾವು ಆಯ್ಕೆಯಾದಲ್ಲಿ ಈ ಕ್ಷೇತ್ರದ ಸಮಸ್ಯೆ ಬಗೆಹರಿಸಲು, ಶಿಕ್ಷಕರಿಗೆ ಹೆಚ್ಚಿನ ಸೌಲಭ್ಯ ದೊರಕಿಸಿಕೊಡಲು ಅನುಕೂಲವಾಗುತ್ತದೆ.