ವಿದ್ಯಾರ್ಥಿಗಳೇ ಗುರಿ ಇರಿಸಿಕೊಂಡು ಸಾಧನೆ ಮಾಡಿ: ಸಿ.ಎನ್. ಮಂಜೇಗೌಡ ಕರೆಇಂದು ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ಓದಿದರೂ ಸಾಲದು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ದೇಶ, ಭಾಷೆ, ನೆಲ, ಜಲದ ಬಗ್ಗೆ ಶಂಕರಾಚಾರ್ಯ, ಗಾಂಧೀಜಿ, ಅಂಬೇಡ್ಕರ್, ಬಸವಣ್ಣರಂತಹ ಮಹಾನೀಯರ ಬಗ್ಗೆಯೂ ಓದಿ ತಿಳಿದುಕೊಳ್ಳಬೇಕು. ಸಮಾಜಕ್ಕೆ ಆದರ್ಶವಾಗುವ ಪೀಳಿಗೆಯಾಗಬೇಕು. ತಂದೆ ತಾಯಿಯನ್ನು ಗೌರವಿಸುವ ಮನುಷ್ಯತ್ವಕ್ಕೆ ಬೆಲೆಕೊಡುವ ಮಕ್ಕಳು ನೀವಾಗಬೇಕು.