ಎಂ.ಕೆ.ಹಾಸ್ಟೆಲ್ಗೆ ವಕ್ಫ್ ಮಂಡಳಿ ನೋಟಿಸ್ ವಿರೋಧಿಸಿ ಪ್ರತಿಭಟನೆಶಿವರಾಂಪೇಟೆಯ ವಿನೋಬಾ ರಸ್ತೆಯ ಎಂಕೆ ಹಾಸ್ಟೆಲ್ಗೆ ಸೇರಿದ ಖಾಲಿ ಜಾಗ ವಕ್ಫ್ ಸೇರಿದ ಆಸ್ತಿ ಎಂದು ನೋಟಿಸ್ ಜಾರಿಗೊಳಿಸಿದ್ದು, ಮೇ 9ರ ಒಳಗೆ ಉತ್ತರ ನೀಡುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಪೂರ್ವ ಪಶ್ಚಿಮ 54 ಅಡಿ, ಉತ್ತರ ದಕ್ಷಿಣ 100 ಅಡಿ ಸೇರಿದಂತೆ ಒಟ್ಟು 3,268 ಚದರ ಅಡಿ ನಮ್ಮ ಸಂಸ್ಥೆಗೆ ಸೇರಿದ್ದು ಎಂದು ಎಂ.ಕೆ.ಹಾಸ್ಟೆಲ್ ವಿಳಾಸಕ್ಕೆ ನೋಟಿಸ್ ಅಂಟಿಸಲಾಗಿದೆ.