ಸಿದ್ದರಾಮಯ್ಯಗೆ ಸಂಕಷ್ಟ ಬಂದಾಗ ಕುರುಬರ ನೆನಪು: ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ವಾಗ್ದಾಳಿರಾಜ್ಯದಲ್ಲಿ ಜಾತಿ ಗಣತಿಗೆ ಆದೇಶಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್. ವಿಶ್ವನಾಥ್ ಅವರು, ಕಾಂತರಾಜು ಆಯೋಗ ನೀಡಿರುವ ಜಾತಿ ಗಣತಿ ವರದಿ ನೀಟಾಗಿದೆ. ಆದರೆ, ಅದನ್ನು ಜಾರಿಗೊಳಿಸಲು ಧೈರ್ಯ ತೋರದ ಹೇಡಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಕಾಂತರಾಜು ಆಯೋಗ ನೀಡಿದ ಜಾತಿಗಣತಿ ವರದಿಯನ್ನು 10 ವರ್ಷ ಕಾಲ ತಲೆ ಕೆಳಗೆ ಇಟ್ಟುಕೊಂಡು ಮಲಗಿದ್ದ ಸಿದ್ದರಾಮಯ್ಯ. ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ವಿರೋಧಿ ಎಂಬುದಕ್ಕೆ ಇದು ಸಾಕ್ಷಿಯಾಗಿದೆ.