ವಿಜಯವಿಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳ ಸಾಧನೆಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 151 ವಿದ್ಯಾರ್ಥಿಗಳಲ್ಲಿ 78 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಪ್ರಥಮ ಭಾಷೆಯಲ್ಲಿ 125 ಕ್ಕೆ 125 ಅಂಕಗಳನ್ನು ಮತ್ತು ಸಂಸ್ಕೃತ ವಿಷಯದಲ್ಲಿ 14 ವಿದ್ಯಾರ್ಥಿಗಳು, ದ್ವಿತೀಯ ಭಾಷೆ ಇಂಗ್ಲಿಷ್ ನಲ್ಲಿ 6 ವಿದ್ಯಾರ್ಥಿಗಳು, ತೃತೀಯ ಭಾಷೆ ಕನ್ನಡ ಮತ್ತು ಹಿಂದಿಯಲ್ಲಿ 16 ವಿದ್ಯಾರ್ಥಿಗಳು, ಗಣಿತ ವಿಷಯದಲ್ಲಿ 2 ವಿದ್ಯಾರ್ಥಿಗಳು, ವಿಜ್ಞಾನ ವಿಷಯದಲ್ಲಿ 2 ವಿದ್ಯಾರ್ಥಿಗಳು, ಸಮಾಜ ವಿಜ್ಞಾನ ವಿಷಯದಲ್ಲಿ 5 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ.