ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆ: ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಶೋಭಾ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನ 3,846 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲ ಅಗತ್ಯ ಮೂಲಭೂತ ಸೌಕರ್ಯಒದಗಿಸಿಕೊಡಲಾಗುತ್ತಿದೆ. ತಾಲೂಕಿನಲ್ಲಿ 13 ಪರೀಕ್ಷಾ ಕೇಂದ್ರಗಳಿದ್ದು, 13 ಮುಖ್ಯ ಅಧೀಕ್ಷಕರು, ಇಬ್ಬರು ಮುಖ್ಯ ಅಧೀಕ್ಷಕರನ್ನು ನಿಯೋಜಿಸಲಾಗಿದೆ. 14 ಮಂದಿ ಮೊಬೈಲ್ ಸ್ವಾಧೀನಾಧಿಕಾರಿಗಳು ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಲಿದ್ದು, ತಲಕಾಡಿನಲ್ಲಿ ಇಬ್ಬರನ್ನು ನಿಯೋಜಿಸಲಾಗಿದೆ