ಸ್ವೀಪ್ ಚಟುವಟಿಕೆ ಪರಿಣಾಮಕಾರಿಯಾಗಿರಲಿ: ಗಾಯತ್ರಿವಿಶೇಷ ಚೇತನರು, ಹಿರಿಯ ನಾಗರಿಕರು, ತೃತೀಯಲಿಂಗಿಗಳು ಹಾಗೂ ವಲಸೆ ಕಾರ್ಮಿಕರು ಮತದಾರರ ಪಟ್ಟಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರ್ಪಡೆಗೊಳ್ಳುವ ಸಲುವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಉತ್ತಮ ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ಕಡಿಮೆ ಮತದಾನವಾಗಿರುವ ಮತಗಟ್ಟೆಗಳನ್ನು ಗುರುತಿಸಿ, ಆ ಭಾಗದಲ್ಲಿ ಸೂಕ್ತ ಯೋಜನೆಗಳನ್ನು ರೂಪಿಸಿಕೊಂಡು ಸ್ವಿಪ್ ಚಟುವಟಿಕೆಗಳನ್ನು ನಡೆಸುವ ಮೂಲಕ ಮತದಾನದ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ