ಗೆಡ್ಡೆ ಗೆಣಸು ಮೇಳಕ್ಕೆ ಚಾಲನೆಮೂರು ದಿನಗಳ ಮೇಳದಲ್ಲಿ ಪರ್ಪಲ್ ಯಾಮ್, ಸಿಹಿ ಗೆಣಸು, ಕೆಸು, ಸುವರ್ಣ ಗೆಡ್ಡೆ, ಬಳ್ಳಿ ಆಲೂಗೆಡ್ಡೆ, ಕೂವೆ ಗೆಡ್ಡೆ, ಬಣ್ಣದ ಸಿಹಿ ಗೆಣಸು, ಹಸಿರು ಮತ್ತು ಕಪ್ಪು ಹರಿಷಿಣ, ಮಾವಿನ ಶುಂಠಿ ಮೊದಲಾದ ಗೆಡ್ಡೆ ಗೆಣಸು ಪ್ರದರ್ಶನ ಮತ್ತು ಮಾರಾಟಕ್ಕೆ ಬಂದಿವೆ. ಗೆಡ್ಡೆ ಗೆಣಸಿನ ಮೌಲ್ಯವರ್ಧಿತ ಪದಾರ್ಥ, ದೇಸಿ ಅಕ್ಕಿ, ಸಿರಿಧಾನ್ಯಗಳು, ಜವಾರಿ ಬೀಜಗಳು, ಗಾಣದ ಎಣ್ಣೆ , ಮತ್ತು ಸಾವಯವ ಪದಾರ್ಥಗಳು ಮಾರಾಟಕ್ಕಿವೆ.