ಸುತ್ತೂರು ಜಾತ್ರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆಸುತ್ತೂರು ಮಠದ ಶ್ರೀಶಿವರಾತ್ರಿ ದೇಶೀಕೇಂದ್ರ ಸ್ವಾಮಿಗಳ ಮಾರ್ಗದರ್ಶನದಲ್ಲಿ ಆರು ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವದಲ್ಲಿ ನಾಡಿನ ವಿವಿಧ ಮಠಗಳ ಮಠಾಧೀಶರು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಹಾಗೂ ರಾಜ್ಯ ಸಚಿವರು, ನೆರೆಯ ರಾಜ್ಯಗಳ ಉದ್ಯಮಿಗಳು, ರಾಜಕೀಯ ಪ್ರಮುಖರು ಸೇರಿದಂತೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು.