ಸುತ್ತೂರು ಜಾತ್ರಾ ಮಹೋತ್ಸವಕ್ಕೆ ವರ್ಣರಂಜಿತ ಚಾಲನೆಮನರಂಜನೆಯ ಜೊತೆಯಲ್ಲಿಯೇ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ಜಾತ್ರೆಯ ಭಾಗವಾಗಿ ಇರಲಿದ್ದು, ಕೃಷಿಯಲ್ಲಿ ಆಗಿರುವ ಆಧುನಿಕ ತಂತ್ರಜ್ಞಾನ, ಆರೋಗ್ಯ ಕ್ಷೇತ್ರದಲ್ಲಿ ಆಗಿರುವ ಆವಿಷ್ಕಾರಗಳು, ಹೊಸ ಸಂಶೋಧನೆಗಳ ಮಾಹಿತಿಯನ್ನು ವಸ್ತುಪ್ರದರ್ಶನದ ಮೂಲಕ ಜನರಿಗೆ ಅರಿವು ಮೂಡಿಸುವುದು ಜಾತ್ರೆಯ ವಿಶೇಷಗಳಲ್ಲಿ ಒಂದಾಗಿದೆ. ಎಲ್ಲ ವರ್ಗದ ಜನರನ್ನು ಬೆಸೆಯುವಂತ ಕ್ರೀಡೆ ಚಟುವಟಿಕೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಗಳು, ಜಾನಪದ, ಸೋಬಾನೆ, ದೇಶಿ ಆಟಗಳು, ಜಾನುವಾರು ಪರಿಷೆ, ದೇಶೀ ತಳಿಗಳ ಉತ್ತೇಜನ, ಸಾಮೂಹಿಕ ವಿವಾಹ, ಆರೋಗ್ಯ ತಪಾಸಣೆ ಎಂತಹ ಸಮಾಜಮುಖಿ ಚಟುವಟಿಕೆಗಳು ಜಾತ್ರೆಯೊಂದಿಗೆ ಬೆಸೆದುಕೊಂಡಿರುವುದು ಸುತ್ತೂರು ಜಾತ್ರೆ ಅರಿವಿನ ಜಾತ್ರೆ ಎಂಬುದನ್ನು ಸಾಕ್ಷಿಕರಿಸಲಿದೆ.