ನಾಳೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ, ಪದ್ಮಶ್ರೀ ಡಾ.ಸಿ.ಎನ್.ಮಂಜುನಾಥ್ ನಿವೃತ್ತಿ‘ನನ್ನ ಮೊದಲ ಮನೆ ಆಸ್ಪತ್ರೆ, 2ನೇಯದು ಮನೆಯಾಗಿತ್ತು. ಜಯದೇವ ಆಸ್ಪತ್ರೆಯನ್ನು ಖಾಸಗಿ ಪಂಚತಾರ ಹೋಟೆಲ್ ಮಾದರಿಯಲ್ಲಿ ನಿರ್ವಹಣೆ ಮಾಡಿ ಮಾನವೀಯತೆಗೆ ಮೊದಲ ಆದ್ಯತೆ ನೀಡಿ. ಮೊದಲು ಟ್ರೀಟ್ ಮೆಂಟ್ ನಂತರ ಪೇಮೆಂಟ್ ಎಂಬ ಧ್ಯೇಯದೊಂದಿಗೆ ಕೆಲಸ ಮಾಡಿದ್ದೇನೆ. ಇದುವರೆಗೆ ಹಣವಿಲ್ಲ, ಕಾರ್ಡ್ ಇಲ್ಲ ಎಂದು ಒಬ್ಬ ರೋಗಿಯನ್ನು ಚಿಕಿತ್ಸೆ ನೀಡದೆ ಹಿಂದಕ್ಕೆ ಕಳುಹಿಸಿಲ್ಲ ಎನ್ನುವುದು ಜೀವಂತ ದಂತ ಕಥೆಯಾಗಿದೆ. ಈ ಸಾಧನೆ ವೈದ್ಯಕೀಯ ಕ್ಷೇತ್ರಕ್ಕೆ ಸರ್ಕಾರಕ್ಕೆ ಗೌರವ ತರುತ್ತದೆ’ ಎನ್ನುತ್ತಾರೆ ಡಾ.ಸಿ.ಎನ್.ಮಂಜುನಾಥ್.