ಆದರ್ಶ ಜೀವನ ಸಾಗಿಸಿ ಮುನ್ನಡೆಯಿರಿಜಿಲ್ಲೆಯ ಫಲಿತಾಂಶ ಉತ್ತಮ ಪಡಿಸುವ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲೆಯ ಎಲ್ಲಾ ಶಿಕ್ಷಕರಿಗೆ ಸಂವಾದ ಕಾರ್ಯಕ್ರಮ, ಶಿಕ್ಷಕರೊಂದಿಗೆ ಸಮಾಲೋಚನೆ, ಪ್ರಶ್ನೆ ಪತ್ರಿಕೆ ವಿಶ್ಲೇಷಣೆ, ಮಾದರಿ ಪ್ರಶ್ನೆ ಪತ್ರಿಕೆ ತಯಾರಿಸಿ ಮಕ್ಕಳಿಗೆ ತಾಲೂಕು, ಜಿಲ್ಲಾ, ರಾಜ್ಯ ಮಟ್ಟದ ಹಾಗೂ ತೆರೆದ ಪುಸ್ತಕ ಪರೀಕ್ಷೆ ನಡೆಸುತ್ತಿದ್ದು ಮಕ್ಕಳು ಆ ಎಲ್ಲಾ ಪರೀಕ್ಷೆಗಳಲ್ಲಿ ನಿರ್ಭಯವಾಗಿ ಭಾಗವಹಿಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಅಂಕ ಪಡೆದು ಫಲಿತಾಂಶ ಉತ್ತಮ ಮಟ್ಟದಲ್ಲಿ ಬರುವಂತೆ ಅರ್ಪಣಾ ಮನೋಭಾವದಿಂದ ವೇಳಾಪಟ್ಟಿಗೆ ಅನುಗುಣವಾಗಿ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು