ಕಪಿಲಾ ನದಿಯಲ್ಲಿ ಪ್ರವಾಹ: ಮುಳುಗಡೆಯಾದ ಹಲವು ದೇವಾಲಯಗಳುಕಪಿಲಾ ನದಿಯಲ್ಲಿ ಸಾಗರೋಪಾದಿಯಲ್ಲಿ ನೀರು ಹರಿಯುತ್ತಿರುವುದರಿಂದ ಮೈಸೂರು- ಕೇರಳ ಮತ್ತು ಊಟಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಪಟ್ಟಣದ ಮಲ್ಲನಮೂಲೆ ಸಮೀಪ ನದಿಯ ನೀರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿರುವುದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿ, ಬದಲಿ ಮಾರ್ಗದಲ್ಲಿ ವಾಹನಗಳನ್ನು ಬಿಡಲಾಗುತ್ತಿದೆ. ಇದರಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ.