ಜೇನು ಕುರುಬರ ಸೋಮಣ್ಣರಿಗೆ ‘ಪದ್ಮಶ್ರೀ’ ಗರಿ...!ಎಚ್.ಡಿ.ಕೋಟೆ ತಾಲೂಕು ಮೊತ್ತ ಹಾಡಿಯ ಜೇನುಕುರುಬ ಸೋಮಣ್ಣ ನಿಜವಾದ ಆದಿವಾಸಿ ನಾಯಕ. ನಾಗರಹೊಳೆ, ಕಾಕನಕೋಟೆ ಅಭಯಾರಣ್ಯದಿಂದ ಮೂಲನಿವಾಸಿಗಳನ್ನು ಒಕ್ಕಲೆಬ್ಬಿಸಿದಾಗ ಬುಡಕಟ್ಟು ಹಾಡಿಗಳಿಗೆ ಕಾಲ್ನಡಿಗೆಯಲ್ಲಿ ತಿರುಗಾಡಿ ಅವರ ಕಷ್ಟಸುಖಗಳಲ್ಲಿ ಭಾಗಿಯಾದವರು. ಮೈಸೂರು- ಚಾಮರಾಜನಗರ- ಕೊಡಗು ಜಿಲ್ಲೆಗಳಲ್ಲಿ ಆದಿವಾಸಿಗಳನ್ನು ಮುಖ್ಯ ವಾಹಿನಿಗೆ ತರಲು ಹಲವರು ಸ್ವಯಂ ಸೇವಾ ಸಂಘಟನೆಗಳೊಂದಿಗೆ ಕಳೆದ ಮೂರು ದಶಕಗಳಿಂದಲೂ ಹೋರಾಟ ನಡೆಸುತ್ತಿದ್ದಾರೆ.