ರಾಸುಗಳಿಗೆ ತಪ್ಪದೇ ಕಾಲುಬಾಯಿ ಜ್ವರಕ್ಕೆ ಲಸಿಕೆ ಹಾಕಿಸಿ: ಡಾ. ಹರೀಶ್ ಸಲಹೆರಾಸುಗಳಲ್ಲಿ ಕಾಣಿಸಿಕೊಳ್ಳುವ ಕಾಲುಬಾಯಿ ಜ್ವರವು ಸಾಂಕ್ರಾಮಿಕ ರೋಗ. ಹಸು, ಎಮ್ಮೆ, ಪ್ರಾಣಿಗಳಲ್ಲಿ ವೈರಾಣುಗಳಿಂದ ಈ ರೋಗ ಕಾಣಿಸಿಕೊಳ್ಳುತ್ತಿದೆ. ರೋಗವು ಅತಿ ಬೇಗನೆ ರೋಗಗ್ರಸ್ತ ರಾಸುವಿನಿಂದ ಇನ್ನೊಂದು ರಾಸುವಿಗೆ ನೇರ ಸಂಪರ್ಕ, ಗಾಳಿ, ನೀರು, ಆಹಾರದ ಮೂಲಕ ಹರಡುತ್ತದೆ. ಇದಕ್ಕೆ ಸೂಕ್ತ ಚಿಕಿತ್ಸೆಯಿಲ್ಲ ಹೀಗಾಗಿ ಲಸಿಕೆ ಹಾಕಿಸುವ ಮೂಲಕ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು