ಸರ್ಕಾರಿ ವಿದ್ಯಾರ್ಥಿ ನಿಲಯ, ವಸತಿ ಶಾಲೆಗಳಿಗೆ ಜಿ.ಪಂ ಸಿಒಇ ಭೇಟಿಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಜಿಲ್ಲೆಯ ವಿವಿಧಡೆ ಸರ್ಕಾರಿ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಶುಕ್ರವಾರ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಗರದ ಸರ್ಕಾರಿ ಪಾಲಿಟೆಕ್ನಿಕ್ ಸಮೀಪದ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಕಾಲೇಜು ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಚಿತ್ರಹಳ್ಳಿಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳ ಸಮುಚ್ಚಯದ ವಸತಿ ಶಾಲೆಗಳಿಗೆ ಭೇಟಿ ನೀಡಿ, ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಗಳ ಸ್ವಚ್ಛತೆ ಹಾಗೂ ಆಹಾರ ಗುಣಮಟ್ಟ ಪರಿಶೀಲಿಸಿದರು.