ವಿಶೇಷಚೇತನರಿಗೆ ತಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇರಲಿವಿಕಲಚೇತನರು ತಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟುಕೊಂಡಾಗ ಮಾತ್ರ ದಿಟ್ಟ ಹೆಜ್ಜೆಗಳನ್ನಿಡಲು ಸಾಧ್ಯವಾಗಲಿದೆ ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು, ಗ್ರಾಮೀಣ ಪುನರ್ವಸತಿ ಯೋಜನೆಯ ಕಾರ್ಯಕರ್ತರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.