ಕಾಡುಗೊಲ್ಲರನ್ನು ಎಸ್ಟಿ ಜಾತಿ ಪಟ್ಟಿಗೆ ಸೇರ್ಪಡೆಗೆ ಆಗ್ರಹಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡ ಜಾತಿ ಪಟ್ಟಿಗೆ ಸೇರ್ಪಡೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಡುಗೊಲ್ಲರ ಸಂಘದ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಚಿತ್ರದುರ್ಗದಲ್ಲಿ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಚಿತ್ರದುರ್ಗ ಜಿಲ್ಲೆಯಲ್ಲಿರುವ ಬಹುತೇಕ ಗೊಲ್ಲರಹಟ್ಟಿಗಳಲ್ಲಿ ಕಾಡುಗೊಲ್ಲರು ವಾಸವಾಗಿದ್ದು ದನ, ಕುರಿ ಸಾಕಾಣಿಕೆ ಮೂಲ ಕಸುಬಾಗಿದೆ. ಕಾಡಿನಲ್ಲಿ ಊರಿಂದ ಊರಿಗೆ ಮೇವು, ನೀರಿಗಾಗಿ ಅಲೆಯುತ್ತಾ ಜೀವನ ಸಾಗಿಸುತ್ತಿದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿಯೂ ಕಾಡುಗೊಲ್ಲ ಸಮುದಾಯ ಶೋಷಣೆಗೆ ಒಳಗಾಗಿದೆ ಎಂದು ಧರಣಿ ನಿರತರು ನೋವು ತೋಡಿಕೊಂಡರು.