ಕೋಟೆನಾಡಲ್ಲಿ ಮುಂದುವರಿದೆ ಮಳೆ ಅಬ್ಬರಕೋಟೆನಾಡು ಚಿತ್ರದುರ್ಗದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಬುಧವಾರ ರಾತ್ರಿಯಿಂದೀಚೆಗೆ ಸುರಿದ ಮಳೆಯಿಂದಾಗಿ ಹಲವು ಚೆಕ್ ಡ್ಯಾಂಗಳ ಭರ್ತಿಯಾಗಿವೆ. ಚಿತ್ರದುರ್ಗ ತಾಲೂಕಿನ ಕಾತ್ರಾಳು ಕೆರೆ ಕೋಡಿ ಬಿದ್ದಿದ್ದು, ಜಿನಿಗೆ ಹಳ್ಳ ಭರ್ತಿಯಾಗಿ ಹರಿಯುತ್ತಿದೆ. ಇದರಿದಾಗಿ ಜಗಳೂರು ತಾಲೂಕಿನ ಸಂಗೇನಹಳ್ಳಿ ಕೆರೆಯ ನೀರಿನ ಪ್ರಮಾಣ ಏರಿಕೆಯಾಗಿದೆ. ಹೊಸದುರ್ಗ ತಾಲೂಕಿನಲ್ಲಿ ಮಳೆಯಾಗುತ್ತಿರುವುದರಿಂದ ವಿವಿ ಸಾಗರಕ್ಕೆ ಒಳ ಹರಿವು ಹೆಚ್ಚಳವಾಗಿದೆ.