ಸಿರಿಗೆರೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆತರಳಬಾಳು ಜಗದ್ಗುರು ಬೃಹನ್ಮಠ ಮತ್ತು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಮೂರು ದಿನಗಳ ಕಾಲ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆದಿದ್ದು, ಗುರುಶಾಂತೇಶ್ವರ ದಾಸೋಹ ಭವನದಲ್ಲಿ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನವೆಂಬರ್ ೩ ರಿಂದ ೫ರ ವರೆಗೆ ವಿವಿಧ ಚಿಂತನಾ ಗೋಷ್ಠಿಗಳು, ಉದಯೋನ್ಮುಖ ಕವಿಗಳ ಗೋಷ್ಠಿ, ಸಾಂಸ್ಕೃತಿಕ ಚಟುವಟಿಕೆಗಳು, ಕನ್ನಡ ಗೀತೆಗಳ ಗಾಯನ, ನಾಟಕಗಳು ನಡೆಯಲಿವೆ.