15 ರಂದು ಮೈಸೂರಿನಲ್ಲಿ ಗ್ಯಾರಂಟಿಗಳ ಸಮಾವೇಶ: ಸಚಿವ ಡಾ.ಎಚ್.ಸಿ. ಮಹದೇವಪ್ಪಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸುವರು. ರಾಜ್ಯ ಸರ್ಕಾರ ವಾಗ್ದಾನ ನೀಡಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದು, ಕೋಟ್ಯಾಂತರ ಜನರು ಯೋಜನೆಗಳ ಫಲಾನುಭವಿಗಳಾಗಿದ್ದಾರೆ ಎಂದು ಹೇಳಿದರು.ಸಮಾವೇಶದಲ್ಲಿ 50 ಸಾವಿರ ಫಲಾನುಭವಿಗಳು ಭಾಗಿಯಾಗಲಿದ್ದು, ಅವರಿಗೆ ವ್ಯವಸ್ಥಿತ ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.