ರಾಜ್ಯದಲ್ಲಿ ಹಸಿರು ಬರ, 4860 ಕೋಟಿ ಪರಿಹಾರಕ್ಕೆ ಮನವಿಕರ್ನಾಟಕದಲ್ಲಿ ಹಸಿರು ಬರ ಎದುರಾಗಿದ್ದು 4860 ಕೋಟಿ ರುಪಾಯಿ ಬೆಳೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ರಾಜ್ಯದ ಬರಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ತಂಡ ಆಗಮಿಸಿದೆ. ಅವರೊಂದಿಗೆ ಈಗಾಗಲೇ ಮಾತುಕತೆ ನಡೆಸಿ ವಾಸ್ತವ ಸ್ಥಿತಿ ಅಧ್ಯಯನ ಮಾಡಿ ವರದಿ ನೀಡುವಂತೆ ಸಲಹೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.