ಅಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಆಕ್ರೋಶಅಸಮರ್ಪಕ ವಿದ್ಯುತ್ ಪೂರೈಕೆ, ಸಿಂಗಲ್ ಫೇಸ್ ವಿದ್ಯುತ್ ಸ್ಥಗಿತ ಮಾಡಿರುವ ಬೆಸ್ಕಾಂ ನಡೆ ವಿರೋಧಿಸಿ ರೈತ ಸಂಘಟನೆಗಳು ಗುರುವಾರ ಪ್ರತ್ಯೆಕ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿವೆ. ವಿದ್ಯುತ್ ಪೂರೈಕೆಯಲ್ಲಿ ಆಗುತ್ತಿರುವ ವ್ಯತ್ಯಯಕ್ಕೆ ರೈತರ ಹೋರಾಟ ಜಿಲ್ಲೆಯಾದ್ಯಂತ ವ್ಯಾಪಿಸುತ್ತಿದ್ದು ಅಕ್ಟೋಬರ್ 18 ರಂದು ಹೆದ್ದಾರಿ ಬಂದ್ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ.