• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾ.ಸದಾಶಿವ, ಕಾಂತರಾಜ್ ಆಯೋಗ ವರದಿ ಅಂಗೀಕಾರಕ್ಕೆ ಆಗ್ರಹ
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ನ್ಯಾಯಮೂರ್ತಿ ಸದಾಶಿವ ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಅಂಗೀಕರಿಸಿ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ದಾದಾಸಾಹೇಬ್ ಎನ್.ಮೂರ್ತಿ ಸ್ಥಾಪಿತ) ವತಿಯಿಂದ ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಸಿಎಸ್ ಆರ್ ಫಂಡ್ ವಿನಿಯೋಗದಲ್ಲಿ ಉದಾಸೀನ
ಚಿತ್ರದುರ್ಗದ ಆಸುಪಾಸಿನ ಗುಡ್ಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳು ಸಿಎಸ್ ಆರ್ ಅನುದಾನ ವಿನಿಯೋಗದಲ್ಲಿ ಸ್ಥಳೀಯ ಆದ್ಯತೆಗೆ ಉದಾಸೀನ ಮನೋಭಾವ ತೋರಿದ್ದಾರೆಂದು ಶಾಸಕ ಕೆ.ಸಿ.ವೀರೇಂದ್ರ ಆರೋಪಿಸಿದರು. ಚಿತ್ರದುರ್ಗ ತಾಲೂಕಿನ ಕುರುಮರಡಿಕೆರೆಯಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಜನತಾದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹಳಷ್ಟು ಜಾಗವನ್ನು ವಿಂಡ್‍ಮಿಲ್ ಕಂಪನಿಗೆ ನೀಡಲಾಗಿದೆ. ಕಂಪನಿಗಳು ಸಿಎಸ್‍ಆರ್ ನಿಧಿಯನ್ನು ವಿಧಾನಸಭಾ ಕ್ಷೇತ್ರದ ಜನರಿಗೆ ಉಪಯೋಗವಾಗುವಂತೆ ಬಳಕೆ ಮಾಡಬೇಕು. ಈ ಕುರಿತು ಮುಂದಿನ ದಿನಗಳಲ್ಲಿ ವಿಂಡ್‍ಮಿಲ್ ಕಂಪನಿಯವರ ಸಭೆ ಕರೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ಏಕೀಕರಣದಲ್ಲಿ ಹಿರಿಯರ ಹೋರಾಟ, ತ್ಯಾಗವಿದೆ
ಹರಿದು ಹಂಚಿಹೋಗಿದ್ದ ಕರ್ನಾಟಕದ ಭಾಗಗಳನ್ನು ಒಗ್ಗೂಡಿಸುವಲ್ಲಿ ಅನೇಕ ಹಿರಿಯರ ಹೋರಾಟ ತ್ಯಾಗ ಬಲಿದಾನವಿದೆ. ರಾಷ್ಟ್ರದ ಬೆಳವಣಿಗೆಯಲ್ಲಿ ಕರ್ನಾಟಕದ ಕೊಡುಗೆ ಅಪಾರ. ಇಲ್ಲಿನ ಜಲ, ಅರಣ್ಯ, ಖನಿಜ ಸೇರಿ ಅಖಂಡ ಭಾರತದ ಅಭಿವೃದ್ಧಿಯಲ್ಲಿ ಕನ್ನಡಿಗರದು ಪಾಲಿದೆ ಎಂದು ಮಾಜಿ ಶಾಸಕ ತಿಪ್ಪಾರೆಡ್ಡಿ ಹೇಳಿದರು. ಭಾರತೀಯ ಯೋಗ ಶಿಕ್ಷಣ ಸಂಸ್ಥೆ, ಕೋಟೆ ವಾಯುವಿಹಾರಿಗಳ ಸಂಘ ಸಂಯುಕ್ತಾಶ್ರಯದಲ್ಲಿ ಕೋಟೆ ಮುಂಭಾಗದ ಲ್ಲಿರುವ ರಾಘವೇಂದ್ರ ವಿದ್ಯಾಸಂಸ್ಥೆಯಲ್ಲಿ ನಡೆದ 68 ನೇ ಕನ್ನಡ ರಾಜ್ಯೋತ್ಸವ ಹಾಗೂ ರಾಜ್ಯ ಮಟ್ಟದ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.,
ಒಳಮೀಸಲಾತಿ ಮಸೂದೆ ಮಂಡನೆ ಆಗದಿದ್ರೆ ಕಾಂಗ್ರೆಸ್ ವಿರುದ್ಧ ಅಭಿಯಾನ
ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಒಳ ಮೀಸಲಾತಿ ಮಸೂದೆಯನ್ನು ಮಂಡಿಸಿ, ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯವ್ಯಾಪಿ ಕಾಂಗ್ರೆಸ್ ವಿರುದ್ದ ಅಭಿಯಾನ ನಡೆಸಲಾಗುವುದೆಂದು ಮೀಸಲಾತಿ ಜನಜಾಗೃತಿ ಸಮಿತಿ ಎಚ್ಚರಿಸಿದೆ.ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೈಕೋರ್ಟ್‌ ವಕೀಲ ಹಾಗೂ ಬಿಎಸ್ಪಿ ರಾಜ್ಯ ಘಟಕದ ಅಧ್ಯಕ್ಷ ಹರಿರಾಮ್, ರಾಜ್ಯ ಸರ್ಕಾರಕ್ಕೆ ಕೊಟ್ಟ ಎಲ್ಲ ಗಡುವು ಮುಗಿದಿದೆ. ಒಳಮೀಸಲಾತಿಯ ಕುರಿತು ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳದಿದ್ದರೆ ಅಧಿವೇಶನ ಮುಗಿದ ನಂತರ ಕಾಂಗ್ರೆಸ್ ವಿರುದ್ಧವಾಗಿ ಅಭಿಯಾನ ಶುರು ಮಾಡುವುದು ಅನಿವಾರ್ಯ.
ಸಮಾಜದ ಕಟ್ಟಕಡೆ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಲಿ
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಲಿ ಎಂಬುದೇ ಈ ಕಾರ್ಯಕ್ರಮದ ಉದ್ದೇಶ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು. ತಾಲೂಕಿನ ಧರ್ಮಪುರ ಗ್ರಾಮದ ವಾಸವಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ ಹಾಗೂ ಧರ್ಮಪುರ ಗ್ರಾಮ ಪಂಚಾಯ್ತಿಯ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತೆಗೆದುಕೊಂಡು ಹೋಗುವ ಸಿದ್ದರಾಮಯ್ಯನವರ ನೆಚ್ಚಿನ ಕಾರ್ಯಕ್ರಮವಾದ ಜನತಾ ದರ್ಶನ ಕಾರ್ಯಕ್ರಮವನ್ನು ಗ್ರಾಮ ಮಟ್ಟಕ್ಕೂ ತಂದಿದ್ದು ಖುಷಿಯಾಗಿದೆ.
ದೇಶದ ಪ್ರತಿ ಸಮಸ್ಯೆಗೂ ಸಂವಿಧಾನದಲ್ಲಿ ಉತ್ತರ
ಪ್ರತಿಯೊಂದು ಸಮಸ್ಯೆಗಳಿಗೂ ಸಂವಿಧಾನದಲ್ಲಿ ಉತ್ತರ ಕಂಡುಕೊಳ್ಳಬಹುದು. ಸಂವಿಧಾನ ಓದಿ ಅರ್ಥೈಸಿಕೊಂಡರೆ ಅದರ ಮಹತ್ವ ಮೌಲ್ಯಗಳು ಅರ್ಥವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆಂಪರಾಜು ಅಭಿಪ್ರಾಯಪಟ್ಟರು.ನಗರದ ಜಿಲ್ಲಾ ವಕೀಲರ ಭವನದಲ್ಲಿ ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸರಸ್ವತಿ ಕಾನೂನು ಕಾಲೇಜು ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಸೋಮವಾರ ಆಯೋಜಿಸಲಾಗಿದ್ದ, ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಭಾರತದ ಸಂವಿಧಾನ ಶ್ರೇಷ್ಠ ಹಾಗೂ ಪ್ರಬುದ್ಧವಾಗಿದೆ. ಪ್ರಪಂಚದ ಎಲ್ಲಾ ರಾಷ್ಟ್ರಗಳು ಭಾರತದ ಸಂವಿಧಾನವನ್ನು ಮೆಚ್ಚಿಕೊಂಡಿವೆ ಎಂದರು.
ರಾಜ್ಯ ಸರ್ಕಾರದಿಂದ ರೈತರಿಗೆ ಬರ ಉಡುಗುರೆ
ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲ ಪರಿಸ್ಥಿತಿ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬರಗಾಲ ಹಿನ್ನೆಲೆಯಲ್ಲಿ ಜನರಿಗೆ ಯಾವುದೇ ಪರಿಹಾರ ನೀಡಲು ಸಾಧ್ಯವಾಗದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಕೇವಲ ಕೇಂದ್ರ ಸರ್ಕಾರ ಮೇಲೆ ಗೂಬೆ ಕೂರಿಸುವ ಕಾರ್ಯವನ್ನು ಮಾಡುತ್ತಿದೆ. ಒಟ್ಟಿನಲ್ಲಿ ಸರ್ಕಾರ ರೈತರಿಗೆ ಬರಗಾಲವನ್ನು ಉಡುಗೊರೆಯಾಗಿ ಕೊಟ್ಟು, ರಾಜ್ಯಸುಭಿಕ್ಷವಾಗಿದೆ ಎಂಬ ಸುಳ್ಳು ಜಾಹೀರಾತು ಮೂಲಕ ಜನತೆಗೆ ಅನ್ಯಾಯವೆಸಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು
ಪಿಯು ಶಿಕ್ಷಣ ಜಿಪಂ ವ್ಯಾಪ್ತಿ ಸೇರ್ಪಡೆಗೆ ಆಕ್ರೋಶ
ಪಿಯು ಶಿಕ್ಷಣ ಜಿಪಂ ವ್ಯಾಪ್ತಿ ಸೇರ್ಪಡೆಗೆ ಆಕ್ರೋಶ
14 ವರ್ಷವಾದರೂ ಅಚ್ಚೇದಿನ್‌ ಕಾಣುತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ
ಪ್ರಧಾನಮಂತ್ರಿ ನರೇಂದ್ರಮೋದಿಯವರ ೧೪ ವರ್ಷದ ಆಡಳಿತದಲ್ಲಿ ಭಾರತೀಯರಿಗೆ ಅಚ್ಚೇ ದೀನ್ ಎಲ್ಲೂ ಕಾಣಲಿಲ್ಲ. ರಾಷ್ಟ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯದ ಜನ ವಿರೋಧಿ ಪ್ರಧಾನಮಂತ್ರಿಯವರ ಎನ್‌ಡಿಎ ಒಕ್ಕೂಟ ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು
28ರಂದು ಹರಳಯ್ಯಪೀಠದಲ್ಲಿ ಕಲ್ಯಾಣ ಕ್ರಾಂತಿ ವಿಜಯೋತ್ಸವ
ತಾಲೂಕಿನ ಐಮಂಗಲ ಗ್ರಾಮದ ಮಹಾ ಶಿವಶರಣ ಶ್ರೀ ಹರಳಯ್ಯಗುರುಪೀಠದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ನ.28 ರಂದು ಬೆಳಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಹಾ ಶಿವಶರಣ ಹರಳಯ್ಯ ಗುರುಪೀಠದ ಶ್ರೀ ಬಸವ ಹರಳಯ್ಯ ಸ್ವಾಮೀಜಿ ತಿಳಿಸಿದರು.
  • < previous
  • 1
  • ...
  • 458
  • 459
  • 460
  • 461
  • 462
  • 463
  • 464
  • 465
  • 466
  • ...
  • 472
  • next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved