• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರುಪಾಯಿ ಹಣ ವಂಚನೆ
ಸೇನೆ ಹಾಗೂ ರೇಲ್ವೆ ಇಲಾಖೆಯಲ್ಲಿ ಗ್ರಾಮೀಣ ಯುವಕರಿಗೆ ಕ್ರೀಡಾ ಕೋಟಾದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಸುಮಾರು 16 ಲಕ್ಷಕ್ಕೂ ಹೆಚ್ಚು ಹಣ ಪಡೆದು ಮೋಸ ಮಾಡಿರುವ ಪ್ರಕರಣ ತಾಲೂಕಿನ ಶ್ರೀರಾಂಪುರದಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಭಂದಿಸಿದಂತೆ ಶಿವರಾಜ್‌ (45) ಹಾಗೂ ಭೀಮವ್ವ ಎಂಬುವವರ ಮೇಲೆ ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಶ್ರೀರಾಂಪುರ ಪೊಲೀಸರು ಬಂಧಿಸಿದ್ದಾರೆ.
ಮುರುಘಾಮಠದಲ್ಲಿ ಇಂದಿನಿಂದ ಶರಣ ಸಂಸ್ಕೃತಿ ಉತ್ಸವ
ಮಧ್ಯ ಕರ್ನಾಟಕದ ಜನಪ್ರಿಯ ದಸರಾವೆಂದೇ ಖ್ಯಾತಿ ಪಡೆದ ಚಿತ್ರದುರ್ಗ ಮುರುಘಾಮಠದ ಶರಣ ಸಂಸ್ಕೃತಿ ಉತ್ಸವ ಅ.21 ರಿಂದ 25 ವರೆಗೆ ನಡೆಯಲಿದ್ದು, ಉತ್ಸವ ಸಮಿತಿ ಗೌರವಾಧ್ಯಕ್ಷ ಅಥಣಿ ಗಚ್ಚಿನ ಮಠದ ಶಿವಬಸವ ಮಹಾಸ್ವಾಮಿಗಳು, ಎಸ್.ಜೆಎಂವಿದ್ಯಾಪೀಠದ ಕಾಯನಿರ್ವಾಣಾಧಿಕಾರಿ ಎಂ.ಭರತ್ ಕುಮಾರ್ ಶುಕ್ರವಾರ ಪೂರ್ವ ಸಿದ್ದತೆ ಪರಿಶೀಲಿಸಿದರು. ಇಂದು ಬೆಳಗ್ಗೆ 10ಕ್ಕೆ ಶ್ರೀಮಠದ ಅನುಭವ ಮಂಟಪ ಅವರಣದಲ್ಲಿ ಬಸವತತ್ವ ಧ್ವಜಾರೋಹಣ ನೆರವೇರಲಿದ್ದು, ಹುಣಸೇಮಠದ ಚನ್ನಬಸವ ಸ್ವಾಮೀಜಿ, ಶ್ರೀ ಗುರು ಬಸವೇಶ್ವರ ಸಂಸ್ಥಾನಮಠದ ಶಿವಾನಂದ ಶ್ರೀಗಳು ಸಮ್ಮುಖ ವಹಿಸುವರು. ಬೆಂಗಳೂರಿನ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಧ್ವಜಾರೋಹಣ ನೆರವೇರಿಸಲಿದ್ದು, ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಆಗಮಿಸುವರು.
ಮೈನಿಂಗ್‌ ಲಾರಿಗಳ ತಡೆದು ಕಡ್ಲೇಗುದ್ದು ಗ್ರಾಮಸ್ಥರಿಂದ ಧರಣಿ
ಸಿರಿಗೆರೆ ಸಮೀಪದ ಗಾದ್ರಿ ಗುಡ್ಡ ಪ್ರದೇಶದಲ್ಲಿ ಗಣಿಗಾರಿಗೆ ನಡೆಸುತ್ತಿರುವ ವೇದಾಂತ ಮತ್ತು ಜಾನ್‌ ಮೈನ್ಸ್‌ ಅದಿರು ಕಂಪನಿಗಳಿಂದ ಕಡ್ಲೇಗುದ್ದು ಗ್ರಾಮಸ್ಥರು ತೀವ್ರ ತೊಂದರೆಗೆ ಒಳಗಾಗಿದ್ದು, ಗ್ರಾಮದೊಳಗೆ ಮೈನ್ಸ್‌ ತುಂಬಿದ ಲಾರಿಗಳು ಪ್ರವೇಶ ಮಾಡಕೂಡದೆಂದು ಬಿಗಿಪಟ್ಟು ಹಿಡಿದು ಧರಣಿ ನಿರತರಾಗಿದ್ದಾರೆ.ಇದರಿಂದಾಗಿ ಕಡ್ಲೇಗುದ್ದು ಗ್ರಾಮದ ಉದ್ದಕ್ಕೂ ಮೈನಿಂಗ್‌ ಲಾರಿಗಳು ಎಲ್ಲೆಂದರಲ್ಲಿ ರಸ್ತೆಗಳಲ್ಲಿ ನಿಂತಿವೆ. ಅದಿರು ಸಾಗಾಣಿಕೆಯಿಂದ ಜನ ರೋಸಿ ಹೋಗಿದ್ದಾರೆ. ಜನ, ಜಾನುವಾರು ಮತ್ತು ಬೆಳೆಗಳ ಮೇಲೆ ಹೇಳಲಾಗದ ದುಷ್ಪರಿಣಾಮ ಉಂಟಾಗುತ್ತಿರುವುದರಿಂದ ಮೈನಿಂಗ್‌ ಲಾರಿಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂಬುದು ಗ್ರಾಮಸ್ಥರ ನಿರ್ಧಾರವಾಗಿದೆ.
ಚಿತ್ರದುರ್ಗ ಲೋಕಸಭೆ ಕ್ಷೇತ್ರ ಟಿಕೆಟ್‌ಗೆ ನಾನೂ ಆಕಾಂಕ್ಷಿ
ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಉದ್ದವಾಗುತ್ತಾ ಸಾಗಿದ್ದು, ಸಚಿವ ಆರ್.ಬಿ.ತಿಮ್ಮಪೂರ ಪುತ್ರ ವಿನಯ್ ಚಿತ್ರದುರ್ಗ ಜಿಲ್ಲೆಯ ಮಠಗಳ ಭೇಟಿ ಮಾಡಿಕೊಂಡು ಹೋದ ಬೆನ್ನಲ್ಲೇ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೇರಲಗುಂಟೆ ಎಂ.ರಾಮಪ್ಪ ನಂಗೂ ಲೋಕಸಭೆಗೆ ಟಿಕೆಟ್ ಬೇಕೆಂದು ಹಕ್ಕೊತ್ತಾಯ ಮಂಡಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಹಾವೇರಿ, ಮೈಸೂರು ಜಿಲ್ಲೆಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ಈ ಮೊದಲು ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೆ. ಕಳೆದ ಬಾರಿಯೂ ಲೋಕಸಭೆಗೆ ಟಿಕೆಟ್ ಕೇಳಿದ್ದೆ. ಈ ಬಾರಿ ಪಕ್ಷ ಅವಕಾಶ ಮಾಡಿಕೊಡುತ್ತದೆ ಎಂಬ ವಿಶ್ವಾಸವಿದೆ ಎಂದರು.
ಎನ್ಎಸ್‌ವಿ ಶಸ್ತ್ರ ಚಿಕಿತ್ಸೆಯಿಂದ ಪುರುಷತ್ವಕ್ಕೆ ಹಾನಿ ಇಲ್ಲ
ಎನ್‍ಎಸ್‍ವಿ ಒಂದು ಸೂಕ್ತ ಸರಳ ಚಿಕಿತ್ಸಾ ವಿಧಾನವಾಗಿದ್ದು, ಕೇವಲ ಐದರಿಂದ ಹತ್ತು ನಿಮಿಷಗಳಲ್ಲಿ ಮುಗಿಯುತ್ತದೆ. ಈ ಚಿಕಿತ್ಸೆಯಿಂದ ಪುರುಷತ್ವಕ್ಕೆ ಹಾನಿಯಿಲ್ಲವೆಂದು ಆಡಳಿತ ವೈದ್ಯಾಧಿಕಾರಿ ಡಾ.ಆರ್.ಮಂಜುನಾಥ್ ಹೇಳಿದರು.
26, 27 ರಂದು ಬಂಜಾರ ಬುಡಕಟ್ಟು ಉತ್ಸವ
ಚಿತ್ರದುರ್ಗ ಹೊರವಲಯದ ಎಸ್.ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ಅ. 26, 27ರಂದು ಬಂಜಾರ ಬುಡಕಟ್ಟು ಸಂಸ್ಕೃತಿ ಉತ್ಸವ ಆಚರಿಸಲಾಗುತ್ತಿದೆ ಎಂದು ಲಂಬಾಣಿ ಮಠದ ಸರ್ದಾರ್ ಶ್ರೀ ಸೇವಾಲಾಲ್ ಸ್ವಾಮೀಜಿ ಹೇಳಿದರು.
ಶಾಲೆಗಳಲ್ಲಿ ಕೊಠಡಿ, ಶೌಚಾಲಯ ನಿರ್ಮಾಣಕ್ಕೆ ₹ 224 ಕೋಟಿಗೆ ಅನುಮೋದನೆ
ಈ ಬಾರಿಯೂ ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿತ್ರದುರ್ಗದ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯಲಿದೆ. ಶಾಲಾ ಕೊಠಡಿ ದುರಸ್ತಿ, ಶೌಚಾಲಯ ನಿರ್ಮಾಣ, ಹೊಸ ಕೊಠಡಿಗಳ ನಿರ್ಮಾಣಕ್ಕೆ 224 ಕೋಟಿ ರೂಪಾಯಿಗಳ ಅನುದಾನ ಜಿಲ್ಲೆಗೆ ಅನುಮೋದನೆಯಾಗಿದೆ. ಉತ್ತಮ ಭೌತಿಕ ಸಂಪನ್ಮೂಲಗಳ ಜತೆಗೆ ಶಿಕ್ಷಕರು ಜ್ಞಾನ ಸಂಪಾದನೆ ಮಾಡಿಕೊಳ್ಳುವುದರ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರವಿಶಂಕರರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
21ರಿಂದ ಐದು ದಿನ ಶರಣ ಸಂಸ್ಕೃತಿ ಉತ್ಸವ
ಬಸವಕೇಂದ್ರ ಮುರುಘಾಮಠದಿಂದ ಪ್ರತಿ ವರ್ಷ ದಸರಾ ವೇಳೆ ಆಚರಿಸಲ್ಪಡುವ ಶರಣ ಸಂಸ್ಕೃತಿ ಉತ್ಸವ ಅಕ್ಟೋಬರ್ 21ರಿಂದ 25ರವರೆಗೆ ಸರಳವಾಗಿ ನಡೆಯಲಿದೆ ಎಂದು ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಹೇಳಿದರು. ಮಠದ ಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿ ಸೋಮವಾರ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿದಿನ ದಾಸೋಹ ನಡೆಯುತ್ತದೆ. ಉತ್ಸವದ ಪ್ರಮಖ ಘಟ್ಟವಾದ ಪೀಠಾರೋಹಣ ವಿಶಿಷ್ಟವಾಗಿ ನಡೆಯಲಿದೆ. ಮುರುಗಿ ಶಾಂತವೀರ ಸ್ವಾಮಿಗಳ ಭಾವಚಿತ್ರವನ್ನು ಇಟ್ಟು ಶೂನ್ಯಪೀಠಾರೋಹಣ ಕಾರ್ಯಕ್ರಮ ನೆರವೇರಿಸಲಾಗುವುದು ಎಂದರು.
ಸರ್ಕಾರಿ ಯೋಜನೆ ಸಾಲ ಮಂಜೂರಾತಿಗೆ ಸಿಬಿಲ್ ಪರಿಗಣನೆ ಬೇಡ
ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಮಂಜೂರಾತಿಗೆ ಬ್ಯಾಂಕುಗಳು ಸಿಬಿಲ್ ಸ್ಕೋರ್ ಪರಿಗಣಿಸಬಾರದು ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಾಕೀತು ಮಾಡಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಸಫಾಯಿ ಕರ್ಮಚಾರಿ ಹಾಗೂ ದಿವ್ಯಾಂಗರ ರಾಷ್ಟ್ರೀಯ ಹಣಕಾಸು ಹಾಗೂ ಅಭಿವೃದ್ಧಿ ನಿಗಮಗಳ ಅನುದಾನದಡಿ ನೀಡುವ ಸಾಲ ಸೌಲಭ್ಯ ಯೋಜನೆಗಳ ಅನುಷ್ಠಾನದ ಕುರಿತು ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಹಾಲು ಉತ್ಪಾದಕ ಸಂಘಗಳ ಸಹಯೋಗದಲ್ಲಿ ಹಸು ಸಾಕಾಣಿಕೆಗೆ, ಸಣ್ಣ ಘಟಕಗಳ ಆಧಾರದಲ್ಲಿ ಪಾರಂಪರಿಕವಾಗಿ ಕುರಿ ಸಾಕಾಣಿಕೆ ಮಾಡಿಕೊಂಡು ಬಂದ ಸಮುದಾಯಗಳಿಗೆ ರಿಯಾಯಿತಿ ಬಡ್ಡಿದರದಲ್ಲಿ ಸಾಲ ಒದಗಿಸುವಂತೆ ಸೂಚಿಸಿದರು.
ಪುತ್ರ ವಿನಯ್‌ ರಾಜಕೀಯ ಪ್ರವೇಶಕ್ಕಾಗಿ ಸಚಿವ ತಿಮ್ಮಾಪೂರ ಕಸರತ್ತು
ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ತಮ್ಮ ಪುತ್ರ ವಿನಯ್ ಸಂಗಡ ಸೋಮವಾರ ಚಿತ್ರದುರ್ಗ ಜಿಲ್ಲೆಯ ಪ್ರಮುಖ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಸೂಕ್ಷ್ಮವಾಗಿ ಪುತ್ರ ಪಾರ್ಲಿಮೆಂಟ್ ಚುನಾವಣೆಗೆ ಸ್ಪರ್ಧಿಸುವ ವಿಷಯ ಪ್ರಸ್ತಾಪಿಸಿದರು.
  • < previous
  • 1
  • ...
  • 480
  • 481
  • 482
  • 483
  • 484
  • 485
  • 486
  • 487
  • 488
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved