ನಾಳೆಯಿಂದ ಕಪ್ಪಡಿ ಕ್ಷೇತ್ರದ ವಾರ್ಷಿಕ ಮಹಾಜಾತ್ರೆಗೆ ಚಾಲನೆದಕ್ಷಿಣ ಕರ್ನಾಟಕದಲ್ಲಿ ಕಪ್ಪಡಿ ಕ್ಷೇತ್ರ ಜಾನಪದ ಕಾವ್ಯ ಹಾಗೂ ಧಾರ್ಮಿಕ ಆಚರಣೆಯ ಪ್ರಭಾವಿ ಕೇಂದ್ರವಾಗಿ ಪ್ರಸಿದ್ಧಿ ಹೊಂದಿದ್ದು ಮೈಸೂರಿನಿಂದ 50 ಕಿ.ಮೀ ಮತ್ತು ಕೆ.ಆರ್.ನಗರದಿಂದ 8 ಕಿ.ಮೀ ದೂರದಲ್ಲಿರುವ ಈ ಕ್ಷೇತ್ರ ಕಾವೇರಿ ನದಿ ದಡದಲ್ಲಿದೆ. ಕಪ್ಪಡಿ ಜಾತ್ರೆ ಈ ಕ್ಷೇತ್ರದ ದೊಡ್ಡ ಉತ್ಸವ. ಪ್ರತಿ ವರ್ಷ ಮಹಾಶಿವರಾತ್ರಿಯಂದು ಜಾತ್ರೆ ಆರಂಭವಾಗಲಿದ್ದು, ಯುಗಾದಿ ಹಬ್ಬದವರೆಗೂ ಒಂದು ತಿಂಗಳ ಕಾಲ ನಡೆಯಲಿದೆ. ಇಲ್ಲಿ ನಡೆಯುವ ಜಾತ್ರೆಗೆ ಕೇರಳ ರಾಜ್ಯದ ಗಡಿಭಾಗ ಸೇರಿದಂತೆ ಕೊಡಗು, ಚಾಮರಾಜನಗರ, ಮಂಡ್ಯ ಹಾಸನ ಮತ್ತು ಉತ್ತರ ಕರ್ನಾಟಕದ ನಾನಾ ಭಾಗಗಳಿಂದಲೂ ಭಕ್ತಾದಿಗಳು ಹರಿದು ಬರುತ್ತಾರೆ.