ಗ್ಯಾರಂಟಿ ಯೋಜನೆ ಟೀಕಿಸುವವರಿಗೆ ತಕ್ಕ ಉತ್ತರ ಕೊಡಿಅಧಿಕಾರಕ್ಕೆ ಬಂದ ತಿಂಗಳ ಅವಧಿಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜನಪರ ಆಡಳಿತ ನೀಡುತ್ತಿದ್ದೇವೆ. ಜನರ ಹಿತ ಕಾಯುವುದೇ ಸರ್ಕಾರ ಜವಾಬ್ಧಾರಿ. ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದಿಂದ ಟೀಕೆ,ಟಿಪ್ಪಣೆಗಳು ಬಂದರೆ ಪಕ್ಷದ ಕಾರ್ಯಕರ್ತರು ಸರಿಯಾದ ಉತ್ತರ ಕೊಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸೂಚಿಸಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶುಕ್ರವಾರ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತ ನೀತಿಯಿಂದ ಜನ ಬೇಸತ್ತಿದ್ದರು. ಚುನಾವಣೆ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಚ್ಚುಕಟ್ಟಾಗಿ ನಿಭಾಯಿಸಿದರು. ಎಲ್ಲರಿಗೂ ಶ್ಲಾಘನೆ ಸಲ್ಲಬೇಕು ಎಂದರು.