• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರೀಯ ಶಿಕ್ಷಣ ನೀತಿ ರದ್ಧತಿ ವಿರುದ್ಧ ಹೋರಾಟ
ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ 3 ಕರಡು ನಿರ್ಣಯಗಳಿಗೆ ಎಬಿವಿಪಿ ನಿರ್ಧಾರ
ಭದ್ರಾ ಮೇಲ್ದಂಡೆ ಕಾಮಗಾರಿ ಅಡಚಣೆ ನಿವಾರಿಸಿ
ರಾಷ್ಟ್ರೀಯ ನಾಟಕೋತ್ಸವದ 5ನೇ ದಿನದ ಕಾರ್ಯಕ್ರಮದಲ್ಲಿ ಸಾನ್ನಿದ್ಯ ವಹಿಸಿ ಪಂಡಿತಾರಾಧ್ಯ ಶ್ರೀ
ಪರಿಸರ ಸ್ನೇಹಿ ದೀಪಾವಳಿ ಆಚರಿಸಿ: ದಿವ್ಯಾಪ್ರಭು
ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮನವಿ । ಹಸಿರು ಪಟಾಕಿ ಮಾತ್ರ ಬಳಕೆ, ಮಾರಾಟಕ್ಕೆ ಅವಕಾಶ
ಕೇಂದ್ರದ ಕಡೆ ಕೈ ತೋರಿಸುವ ರಾಜ್ಯ ಸರ್ಕಾರದ ಕೆಲಸವೇನು ?
ಬರ ನಿರ್ವಹಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲ । ಸುದ್ದಿಗೋಷ್ಠಿಯಲ್ಲಿ ಎಂಎಲ್‌ಸಿ ನವೀನ್‌ ಕಿಡಿ
ಕನಿಷ್ಠ ವೇತನ ಕಾಯ್ದೆ ಸಹಾಯವಾಣಿ ಆರಂಭಿಸಿ
ಕನಿಷ್ಠ ವೇತನ ಕಾಯ್ದೆಯ ಬಗ್ಗೆ ಕಾರ್ಮಿಕರಿಗೆ ಮಾಹಿತಿ ಇಲ್ಲ. ಮಾಹಿತಿ ಇದ್ದವರಿಗೆ ಯಾರಿಗೆ ದೂರು ನೀಡಬೇಕು ಎಂಬುದರ ಬಗ್ಗೆ ಗೊಂದಲ ವಿರುತ್ತದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಪ್ರತ್ಯೇಕ ಸಹಾಯವಾಣಿ ಆರಂಭಿಸಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಚಿತ್ರದುರ್ಗ ಹಾಗೂ ದಾವಣಗೆರೆ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಕನಿಷ್ಠ ವೇತನ ಕಾಯ್ದೆ ಅಡಿ ಉಲ್ಲಂಘನೆಯ ಕೇವಲ ನಾಲ್ಕು ಪ್ರಕರಣಗ ಳು ದಾಖಲಾಗಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇದು ಅಧಿಕಾರಿಗಳ ನಿರ್ಲಿಪ್ತ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ ಎಂದರು.
ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 6500 ಕೋಟಿ ರುಪಾಯಿ ಅನುದಾನ
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಪ್ರಸ್ತುತ ಸುಮಾರು 6500 ಕೋಟಿ ರು. ಅನುದಾನ ಲಭ್ಯವಿದ್ದು, ಅರ್ಹ ಫಲಾನುಭವಿಗಳ ಬದುಕು ಗಟ್ಟಿಗೊಳ್ಳಲು ಹಾಗೂ ಅವರು ಸ್ವಾಭಿಮಾನದಿಂದ ಜೀವನ ಸಾಗಿಸುವಂತಾಗಲು ಸದ್ಬಳಕೆಯಾಗಬೇಕಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ರಾಜ್ಯಕ್ಕೆ ಮರು ನಾಮಕರಣ ಬೇಡ: ಮೂಡ್ನಾಕೂಡು ಚಿನ್ನಸ್ವಾಮಿ
ಕರ್ನಾಟಕ ರಾಜ್ಯದ ಹೆಸರನ್ನು ಬಸವನಾಡು ಎಂಬುದಾಗಿ ಬದಲಿಸಲು ಕೆಲವು ಸಂಘಟನೆಗಳು, ಬುದ್ಧಿಜೀವಿಗಳು ಪ್ರಯತ್ನಿಸುತ್ತಿದ್ದಾರೆ. ಅಂತಹ ಪ್ರಯತ್ನಗಳನ್ನು ಕೈಬಿಡಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಹೇಳಿದರು.ಸಿರಿಗೆರೆಯಲ್ಲಿ ತರಳಬಾಳು ಜಗದ್ಗುರು ಬೃಹನ್ಮಠ ಮತ್ತು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಏರ್ಪಡಿಸಿರುವ ಮೂರು ದಿನಗಳ ಕನ್ನಡ ರಾಜ್ಯೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಆಲೋಚನೆಗಳಿಂದ ಬಡಿದಾಡುವ ಕೈಗಳಿಗೆ ಬಡಿಗೆ ಕೊಟ್ಟಂತಾಗುತ್ತದೆ ಎಂದು ಎಚ್ಚರಿಸಿದರು.
ಶಿಕ್ಷಣದಿಂದ ಮಾತ್ರ ಸಾಮಾಜಿಕ ಸ್ಥಿತಿಗತಿ ಬದಲಾವಣೆ
ಶಿಕ್ಷಣದಿಂದ ಮಾತ್ರ ಸಾಮಾಜಿಕ ಸ್ಥಿತಿಗತಿ ಬದಲಾವಣೆ ಸಾಧ್ಯ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದು ಸರಸ್ವತಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್. ಸುಧಾದೇವಿ ಹೇಳಿದರು.ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ ದಾವಣಗೆರೆ ವಿಶ್ವವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಐಕ್ಯೂಎಸಿ ಸಹಯೋಗದಲ್ಲಿ 2023-24ನೇ ಸಾಲಿನ ಪಠ್ಯೇತರ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಕರು ಉಪನ್ಯಾಸ ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಯಾವ ರೀತಿಯಾಗಿ ಸಮಾಜದಲ್ಲಿ ಬದುಕಬೇಕು ಎಂಬ ನೀತಿ ಪಾಠ ಹೇಳಬೇಕು ಎಂದರು.
ಅಡಕೆ ವ್ಯಾಪಾರಿಯ ₹1 ಕೋಟಿ ದೋಚಿದ್ದು ಗೆಳೆಯ ಆ್ಯಂಡ್‌ ಗ್ಯಾಂಗ್!
ಇತ್ತೀಚೆಗೆ ನಡೆದಿದ್ದ ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರದ ಅಡಕೆ ವ್ಯಾಪಾರಿ ಎಚ್‌.ಎಸ್‌.ಉಮೇಶ್ ಅವರಿಗೆ ಸೇರಿದ ₹1 ಕೋಟಿ ಕಳ್ಳತನ ಪ್ರಕರಣ ಸಂಬಂಧ ಅವರ ಕಾರು ಚಾಲಕ ಹಾಗೂ ಆತನ ಸ್ನೇಹಿತೆ ಸೇರಿದಂತೆ ನಾಲ್ವರು ಪೊಲೀಸರ ಬಲೆಗೆ ಬಿದ್ದಿದ್ದಾರೆ.ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ತಾಳ್ಯ ಗ್ರಾಮದ ಪಿ.ಬಿ.ಸ್ವಾಮಿ, ಆತನ ಸ್ನೇಹಿತೆ ಬೆಂಗಳೂರಿನ ಮಹದೇವಪುರ ಸಮೀಪದ ಲಕ್ಷ್ಮೀಸಾಗರ ಬಡಾವಣೆಯ ಎನ್‌.ಎಂ.ಅನುಪಮಾ, ಚಿತ್ರದುರ್ಗ ಜಿಲ್ಲೆಯ ಕೆಳಗೋಟೆಯ ಎನ್‌.ಪವನ್ ಹಾಗೂ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಹೇಶ್ವರಿನಗರದ ಎಸ್.ಆರ್.ಕಾರ್ತಿಕ್ ಬಂಧಿತರು. ಆರೋಪಿಗಳಿಂದ ₹90.19 ಲಕ್ಷ ನಗದು, ₹6.49 ಲಕ್ಷ ಮೌಲ್ಯದ 2 ಐ–ಫೋನ್, 2 ವಾಚ್‌ಗಳು ಹಾಗೂ 61 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ಕೋಟೆ ನಾಡು ಚಿತ್ರದುರ್ಗದಲ್ಲಿ ಗಮನ ಸೆಳೆದ ಸ್ತಬ್ಧಚಿತ್ರ ಮೆರವಣಿಗೆ
ಸುವರ್ಣ ಸಂಭ್ರಮದ ಹಿನ್ನೆಲೆ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾದ 68ನೇ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ನಗರದ ನೀಲಕಂಠೇಶ್ವರ ದೇವಸ್ಥಾನದ ಬಳಿ ಜಿಲ್ಲಾಧಿಕಾರಿ ದಿವ್ಯಾಪ್ರಭು ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಆಕರ್ಷಕ ಸ್ತಬ್ಧಚಿತ್ರದ ಮೆರವಣಿಗೆಗೆ ಚಾಲನೆ ನೀಡಿದರು. ಕಹಳೆ ವಾದನ, ಹಗಲು ವೇಷ, ತಾಶರಂ ಡೋಲು ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಂಡಿದ್ದವು. ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯ ಮುಂಚೂಣಿಯಲ್ಲಿದ್ದರು.
  • < previous
  • 1
  • ...
  • 505
  • 506
  • 507
  • 508
  • 509
  • 510
  • 511
  • 512
  • 513
  • 514
  • 515
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved