ಹುಣಸೂರು ಜಿಲ್ಲಾ ಕೇಂದ್ರವಾಗಲು ಶ್ರಮಿಸೋಣವಿಶ್ವದಲ್ಲೇ ಅತ್ಯುತ್ತಮ ದರ್ಜೆಯ ತಂಬಾಕು ಬೆಳೆಯುವ ಪ್ರದೇಶ ಹುಣಸೂರು ಆಗಿದೆ. ತೇಗದ ನಾಡು ಎಂಬ ಕೀರ್ತಿಗೂ ಪಾತ್ರವಾಗಿದೆ. ಪವಿತ್ರ ಲಕ್ಷ್ಮಣತೀರ್ಥ ನದಿ ಹರಿಯುವ ಸ್ಥಳ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನ, ಪರಿಸರ, ಪ್ರಕೃತಿ ಸಂಪತ್ತು ಹೊಂದಿದ ನಾಡು. ಹುಣಸೂರು ಉಪವಿಭಾಗ ವ್ಯಾಪ್ತಿಯ ಕೆ.ಆರ್. ನಗರ, ಎಚ್.ಡಿ. ಕೋಟೆ, ಪಿರಿಯಾಪಟ್ಟಣ, ಸರಗೂರು, ಸಾಲಿಗ್ರಾಮ ಗಳನ್ನು ಒಳಗೊಂಡ ಎಲ್ಲ ತಾಲೂಕುಗಳು ಇಂತಹುದೇ ಪ್ರಭಾವವನ್ನು ಹೊಂದಿದೆ.