ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ವಿಫುಲ ಅವಕಾಶಇಂದು ಎಲ್ಲಾ ಕ್ಷೇತ್ರಗಳಲ್ಲೂ ಕೃತಕ ಬುದ್ಧಿಮತ್ತೆ ವ್ಯಾಪಿಸಿದ್ದು, ಇದರಿಂದ ಬಳಕೆದಾರರಿಗೆ ಉತ್ತಮ ರೀತಿಯಲ್ಲಿ ಉಪಯೋಗವಾಗುತ್ತಿದೆ. ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು, ವಿದ್ಯಾರ್ಥಿಗಳು ಮುಖ್ಯ ವಿಷಯಗಳನ್ನು ಆಳವಾಗಿ ಅಧ್ಯಯನ ಮಾಡಿ ಮೂಲತತ್ವಗಳನ್ನು ಗ್ರಹಿಸಬೇಕು ಎಂದು ಕರ್ನಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ಪಂಕಜ್ ಗುಪ್ತಾ ತಿಳಿಸಿದರು.