• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶೇಷಚೇತನರಿಗೆ ತಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇರಲಿ
ವಿಕಲಚೇತನರು ತಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟುಕೊಂಡಾಗ ಮಾತ್ರ ದಿಟ್ಟ ಹೆಜ್ಜೆಗಳನ್ನಿಡಲು ಸಾಧ್ಯವಾಗಲಿದೆ ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು, ಗ್ರಾಮೀಣ ಪುನರ್ವಸತಿ ಯೋಜನೆಯ ಕಾರ್ಯಕರ್ತರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತೆಲಂಗಾಣ ಗೆಲುವಿಗೆ ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮಾಚರಣೆ
ತೆಲಂಗಾಣದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಭಾನುವಾರ ಚಿತ್ರದುರ್ಗ ಕಾಂಗ್ರೆಸ್ ಜಿಲ್ಲಾ ಕಚೇರಿ ಮುಂದೆ ಮಾಜಿ ಸಚಿವ ಅಂಜನೇಯ ತಮಟೆಯನ್ನು ಬಾರಿಸಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರೆ, ಮಹಿಳಾ ಕಾರ್ಯಕರ್ತರು ನೃತ್ಯ ಮತ್ತು ಸಾರ್ವಜನಿಕರಿಗೆ ಸಿಹಿಯನ್ನು ಹಂಚುವುದರ ಮೂಲಕ ವಿಜಯೋತ್ಸವ ಆಚರಣೆ ಮಾಡಲಾಯಿತು.
ವಕೀಲರ ಮೇಲೆ ಹಲ್ಲೆ: ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ
Attack on Lawyer: Lawyer Association Protested
ಕೀರ್ಥನೆಗಳ ಮೂಲಕ ಸಮಾಜಕ್ಕೆ ಸಮಾನತೆ ಸಂದೇಶ ಕನಕದಾಸರು
ಸಂತ ಶ್ರೇಷ್ಠ ಭಕ್ತ ಕನಕದಾಸರು ಕುಲ,ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಎನ್ನುವ ಕೀರ್ತನೆ ಹಾಡುವ ಮೂಲಕ ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದ್ದಾರೆ ಎಂದು ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ಹೇಳಿದರು.ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ ವತಿಯಿಂದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ದೇಶದ ಪ್ರಥಮ ಶಿಕ್ಷಣ ಮಂತ್ರಿ ಡಾ.ಮೌಲಾನ ಅಬ್ದುಲ್‌ ಕಲಾಂ ಆಜಾದ್ ಮತ್ತು ಪ್ರಸ್ತುತ ಶಿಕ್ಷಣ ವ್ಯವಸ್ಥೆ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಭಾರತ ಸರ್ವ ಜನಾಂಗದ ಶಾಂತಿಯ ತೋಟ ಎಂದು ಬಾಯಲ್ಲಿ ಹೇಳುವವರು ಜಾತಿ ಧರ್ಮಗಳ ಬಗ್ಗೆ ಮಾತನಾಡುವುದರಲ್ಲಿ ಅರ್ಥವಿಲ್ಲ. ಗಾಳಿ, ನೀರು, ಬೆಳಕು, ದೀಪಕ್ಕೆ ಯಾವ ಜಾತಿಯಿದೆ ಎಂದು ಪ್ರಶ್ನಿಸಿದರು.
ಭಕ್ತಿ ಜಾತಿಗೆ ಸೀಮಿತವಲ್ಲವೆಂದು ನಿರೂಪಿಸಿದ ಕನಕದಾಸರು
ಮಾನವ ಕುಲಕ್ಕೇ ಕನಕದಾಸರು ಆದರ್ಶ ವ್ಯಕ್ತಿಯಾಗಿದ್ದಾರೆ. ಭಕ್ತಿ ಯಾವ ಜಾತಿಗೂ ಸೀಮಿತವಲ್ಲ ಎಂಬುದನ್ನು ಕನಕರು ನಿರೂಪಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಭಿಪ್ರಾಯಪಟ್ಟರು.ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಕನಕ ಜಯಂತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ, ಮಾತನಾಡಿದರು. ಕುಲದ ನೆಲೆ ಹುಡುಕಬೇಡಿ ಎಂದು ಕನಕದಾಸರು ಅಂದೇ ಹೇಳಿದ್ದರು. ಸಾಮಾಜಿಕ ನ್ಯಾಯ ಹಾಗೂ ನಡುಗನ್ನಡ ಸಾಹಿತ್ಯದ ಹರಿಕಾರರಾಗಿದ್ದ ಕನಕರು ಸಂತ, ತತ್ವಜ್ಞಾನಿ, ಕವಿ, ಕೀರ್ತನಕಾರರಾಗಿದ್ದರು. ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವುಗಳನ್ನು ಪರಿಪಾಲನೆ ಮಾಡಬೇಕು ಎಂದರು.
ಜಲಜೀವನ್ ಮಿಷನ್ ಕಾಮಗಾರಿ ಗುಣಮಟ್ಟ ಪರಿಶೀಲಿಸಿ
ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವ ಮೂಲಕ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಾಮಗಾರಿ ಗುಣಮಟ್ಟ ಪರಿಶೀಲಿಸಬೇಕೆಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವುದೇ ಅಧಿಕಾರಿಗಳು ಸರ್ಕಾರಿ ಸೌಲಭ್ಯವನ್ನು ಅರ್ಹರಿಗೆ ತಲುಪಿಸುವಲ್ಲಿ ನಿರ್ಲಕ್ಷ್ಯ ತೋರುವುದನ್ನು ಸಹಿಸುವುದಿಲ್ಲ. ಚಿತ್ರದುರ್ಗ ನಗರ ಸೇರಿದಂತೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಇದೆ
ಫ್ರುಟ್ಸ್‌ ತಂತ್ರಾಂಶದಲ್ಲಿ ಬೆಳೆ ತಿದ್ದುಪಡಿ ಮಾಡಿದ್ರೆ ಎಫ್ ಐಆರ್
ಫ್ರುಟ್ಸ್ ತಂತ್ರಾಂಶದಲ್ಲಿ ರೈತರ ಬೆಳೆ ನಮೂದನ್ನು ಅಕ್ರಮವಾಗಿ ತಿದ್ದುಪಡಿ ಮಾಡುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಎಫ್‍ಐಆರ್ ದಾಖಲಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಾಪ್ರಭು ಎಚ್ಚರಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಖರೀದಿ ಕೇಂದ್ರ ತೆರೆಯುವ ಬಗ್ಗೆ ಪೂರ್ವಸಿದ್ಧತೆಗಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ರಾಗಿಯನ್ನು ಖರೀದಿ ಮಾಡಲು ರೈತರ ನೋಂದಣಿ ಪ್ರಕ್ರಿಯೆಯನ್ನು ಶೀಘ್ರ ಪ್ರಾರಂಭಿಸಲಾಗುವುದು ಎಂದರು.
ನ್ಯಾ.ಸದಾಶಿವ, ಕಾಂತರಾಜ್ ಆಯೋಗ ವರದಿ ಅಂಗೀಕಾರಕ್ಕೆ ಆಗ್ರಹ
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ನ್ಯಾಯಮೂರ್ತಿ ಸದಾಶಿವ ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಅಂಗೀಕರಿಸಿ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ದಾದಾಸಾಹೇಬ್ ಎನ್.ಮೂರ್ತಿ ಸ್ಥಾಪಿತ) ವತಿಯಿಂದ ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಸಿಎಸ್ ಆರ್ ಫಂಡ್ ವಿನಿಯೋಗದಲ್ಲಿ ಉದಾಸೀನ
ಚಿತ್ರದುರ್ಗದ ಆಸುಪಾಸಿನ ಗುಡ್ಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳು ಸಿಎಸ್ ಆರ್ ಅನುದಾನ ವಿನಿಯೋಗದಲ್ಲಿ ಸ್ಥಳೀಯ ಆದ್ಯತೆಗೆ ಉದಾಸೀನ ಮನೋಭಾವ ತೋರಿದ್ದಾರೆಂದು ಶಾಸಕ ಕೆ.ಸಿ.ವೀರೇಂದ್ರ ಆರೋಪಿಸಿದರು. ಚಿತ್ರದುರ್ಗ ತಾಲೂಕಿನ ಕುರುಮರಡಿಕೆರೆಯಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಜನತಾದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹಳಷ್ಟು ಜಾಗವನ್ನು ವಿಂಡ್‍ಮಿಲ್ ಕಂಪನಿಗೆ ನೀಡಲಾಗಿದೆ. ಕಂಪನಿಗಳು ಸಿಎಸ್‍ಆರ್ ನಿಧಿಯನ್ನು ವಿಧಾನಸಭಾ ಕ್ಷೇತ್ರದ ಜನರಿಗೆ ಉಪಯೋಗವಾಗುವಂತೆ ಬಳಕೆ ಮಾಡಬೇಕು. ಈ ಕುರಿತು ಮುಂದಿನ ದಿನಗಳಲ್ಲಿ ವಿಂಡ್‍ಮಿಲ್ ಕಂಪನಿಯವರ ಸಭೆ ಕರೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ಏಕೀಕರಣದಲ್ಲಿ ಹಿರಿಯರ ಹೋರಾಟ, ತ್ಯಾಗವಿದೆ
ಹರಿದು ಹಂಚಿಹೋಗಿದ್ದ ಕರ್ನಾಟಕದ ಭಾಗಗಳನ್ನು ಒಗ್ಗೂಡಿಸುವಲ್ಲಿ ಅನೇಕ ಹಿರಿಯರ ಹೋರಾಟ ತ್ಯಾಗ ಬಲಿದಾನವಿದೆ. ರಾಷ್ಟ್ರದ ಬೆಳವಣಿಗೆಯಲ್ಲಿ ಕರ್ನಾಟಕದ ಕೊಡುಗೆ ಅಪಾರ. ಇಲ್ಲಿನ ಜಲ, ಅರಣ್ಯ, ಖನಿಜ ಸೇರಿ ಅಖಂಡ ಭಾರತದ ಅಭಿವೃದ್ಧಿಯಲ್ಲಿ ಕನ್ನಡಿಗರದು ಪಾಲಿದೆ ಎಂದು ಮಾಜಿ ಶಾಸಕ ತಿಪ್ಪಾರೆಡ್ಡಿ ಹೇಳಿದರು. ಭಾರತೀಯ ಯೋಗ ಶಿಕ್ಷಣ ಸಂಸ್ಥೆ, ಕೋಟೆ ವಾಯುವಿಹಾರಿಗಳ ಸಂಘ ಸಂಯುಕ್ತಾಶ್ರಯದಲ್ಲಿ ಕೋಟೆ ಮುಂಭಾಗದ ಲ್ಲಿರುವ ರಾಘವೇಂದ್ರ ವಿದ್ಯಾಸಂಸ್ಥೆಯಲ್ಲಿ ನಡೆದ 68 ನೇ ಕನ್ನಡ ರಾಜ್ಯೋತ್ಸವ ಹಾಗೂ ರಾಜ್ಯ ಮಟ್ಟದ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.,
  • < previous
  • 1
  • ...
  • 540
  • 541
  • 542
  • 543
  • 544
  • 545
  • 546
  • 547
  • 548
  • ...
  • 555
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved