ಸಮಾಜದ ಕಟ್ಟಕಡೆ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಲಿಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಲಿ ಎಂಬುದೇ ಈ ಕಾರ್ಯಕ್ರಮದ ಉದ್ದೇಶ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು. ತಾಲೂಕಿನ ಧರ್ಮಪುರ ಗ್ರಾಮದ ವಾಸವಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ ಹಾಗೂ ಧರ್ಮಪುರ ಗ್ರಾಮ ಪಂಚಾಯ್ತಿಯ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತೆಗೆದುಕೊಂಡು ಹೋಗುವ ಸಿದ್ದರಾಮಯ್ಯನವರ ನೆಚ್ಚಿನ ಕಾರ್ಯಕ್ರಮವಾದ ಜನತಾ ದರ್ಶನ ಕಾರ್ಯಕ್ರಮವನ್ನು ಗ್ರಾಮ ಮಟ್ಟಕ್ಕೂ ತಂದಿದ್ದು ಖುಷಿಯಾಗಿದೆ.