ಮೈಸೂರು ವಿವಿ ಒಂದು ಸೆಮಿಸ್ಟರ್ ಪರೀಕ್ಷಾ ಶುಲ್ಕ 3300 ರು. ಹೆಚ್ಚಳ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆಮೈಸೂರು ವಿವಿಗೆ ವಿವಿಧ ಜಿಲ್ಲೆ, ರಾಜ್ಯಗಳಿಂದ ಎಷ್ಟೋ ಬಡ, ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಹಲವು ಕನಸುಗಳನ್ನು ಹೊತ್ತು ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುತ್ತಾರೆ. ಆದರೆ, ವಿವಿ ತನ್ನ ವ್ಯಾಪಾರಿ ಧೋರಣೆಯಿಂದಾಗಿ ಪ್ರತಿ ವರ್ಷ ಶೇ.10 ಪರೀಕ್ಷಾ ಶುಲ್ಕ ಹೆಚ್ಚುಸುತ್ತಿರುವುದರಿಂದ ಪ್ರಸ್ತುತ ಮತ್ತು ಭವಿಷ್ಯದಲ್ಲಿ ಉನ್ನತ ಶಿಕ್ಷಣದಿಂದ ಬಡ ವಿದ್ಯಾರ್ಥಿಗಳು ದೂರ ಉಳಿಯುವುದರಲ್ಲಿ ಯಾವುದೇ ಸಂದೇಹವಿಲ್ಲ.