ಸಾರಾಂಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನಡುವೆ ಸೋಮವಾರ ಭಾಷಾ ಜುಗಲ್ ಬಂದಿ ನಡೆಯಿತು
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನಡುವೆ ಸೋಮವಾರ ಭಾಷಾ ಜುಗಲ್ ಬಂದಿ ನಡೆಯಿತು. ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಸೋಮವಾರ ನಡೆದ ವಜ್ರ ಮಹೋತ್ಸವ ಸಮಾರಂಭದಲ್ಲಿ ಈ ಘಟನೆ ಜರುಗಿತು.
ಮೊದಲಿಗೆ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಭಾಷಣ ಪ್ರಾರಂಭಿಸುವ ಮುನ್ನ ‘ಯು ನೋ ಕನ್ನಡ? (ನಿಮಗೆ ಕನ್ನಡ ಬರುತ್ತದೆಯೇ?)’ ಎಂದು ರಾಷ್ಟ್ರಪತಿಗಳಿಗೆ ತಮಾಷೆಯಿಂದ ಕೇಳಿದರು.
ಸಿಎಂ ಪ್ರಶ್ನೆಗೆ ರಾಷ್ಟ್ರಪತಿ ಹಾಗೂ ವೇದಿಕೆಯ ಆಹ್ವಾನಿತರು ನಕ್ಕರು. ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು ‘ಐ ಸ್ಪೀಕ್ ಇನ್ ಕನ್ನಡ (ನಾನು ಕನ್ನಡದಲ್ಲಿ ಮಾತನಾಡುತ್ತೇನೆ)’ ಎಂದು ಭಾಷಣ ಆರಂಭಿಸಿದರು. ಸಿದ್ದರಾಮಯ್ಯ ಅವರ ನಂತರ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ‘ದೇಶದ ಎಲ್ಲಾ ಭಾಷೆಗಳು ನನಗೆ ಇಷ್ಟ. ಎಲ್ಲಾ ಭಾಷೆಗಳನ್ನು ನಾನು ಗೌರವಿಸುತ್ತೇನೆ. ಪ್ರೀತಿಸುತ್ತೇನೆ. ಕನ್ನಡವು ಸ್ವಲ್ಪ ಸ್ವಲ್ಪ ಅರ್ಥ ಆಗುತ್ತೆ’ ಎಂದು ಹೇಳಿದರು.