ಸಾರಾಂಶ
ಮೈಸೂರು: ಮೈಸೂರು ಪಾಕ್ ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮೈಸೂರು ರಾಜವಂಶಸ್ಥರಾದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು.
ಮೈಸೂರು: ಮೈಸೂರು ಪಾಕ್ ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮೈಸೂರು ರಾಜವಂಶಸ್ಥರಾದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು.
ಮೈಸೂರು ಪಾಕ್ ಹೆಸರು ಬದಲಾವಣೆ ಚರ್ಚೆ ಕುರಿತು ಮಂಗಳವಾರ ಪ್ರತಿಕ್ರಿಯಿಸಿದ ಅವರು, ಪಾಕ ಎನ್ನುವುದು ಸಂಸ್ಕೃತ ಪದ. ಪಾಕ ಎಂದರೆ ಸಿಹಿ ಎಂದರ್ಥ ಬರುತ್ತದೆ. ಪಾಕ್ ಎಂಬ ಪದ ಇದೆ ಎಂದು ಅದನ್ನು ಬದಲಾಯಿಸುವುದು ಸರಿಯಲ್ಲ. ಮೈಸೂರು ಪಾಕ್ ಗೆ ಎಷ್ಟೋ ವರ್ಷಗಳ ಇತಿಹಾಸ ಇದೆ. ಅದೇ ರೀತಿ ಮಾಡುತ್ತಾ ಹೋದರೆ ಎಷ್ಟೋ ಹೆಸರುಗಳನ್ನು ಬದಲಾಯಿಸಬೇಕಾಗುತ್ತದೆ. ಅದೆಲ್ಲ ಈಗ ಅಪ್ರಸ್ತುತ ಎಂದು ಹೇಳಿದರು.ರಾಯಭಾರಿ ಆಗಲ್ಲ
ಮೈಸೂರು ಸ್ಯಾಂಡಲ್ ಸೋಪಿನ ಜಾಹೀರಾತಿಗೆ ನಾನು ರಾಯಭಾರಿ ಆಗಲ್ಲ, ಅದರ ಬಗ್ಗೆ ನನಗೆ ಆಸಕ್ತಿಯೂ ಇಲ್ಲ. ನಾನು ಜನ ಸೇವೆ ಕ್ಷೇತ್ರದಲ್ಲಿದ್ದೇನೆ, ನಾನು ಅದಕ್ಕೆಲ್ಲ ಹೋಗುವುದಿಲ್ಲ. ನನ್ನ ಕೆಲಸವೇ ಬೇಕಾದಷ್ಟು ಇದೆ ಎಂದು ಅವರು ತಿಳಿಸಿದರು. ಮೈಸೂರು ಸ್ಯಾಂಡಲ್ ಸೋಪಿಗೆ ಅದರದೇ ಆದ ಐತಿಹ್ಯವಿದೆ. ಅದಕ್ಕೆ ದೇಶಾದ್ಯಂತ ತನ್ನದೇ ಆದ ಮಾರುಕಟ್ಟೆ ಇದೆ. ದೇಶದ ಮಟ್ಟದಲ್ಲಿ ಪ್ರಸಿದ್ಧಿಯಾಗಿರುವ ಕನ್ನಡದ ಕಲಾವಿದರಿಂದ ಜಾಹೀರಾತು ಕೊಡಿಸಲಿ. ಅನ್ಯ ಭಾಷಿಕ ಕಲಾವಿದರಿಗೆ ಹೆಚ್ಚು ಸಂಭಾವನೆ ಕೊಟ್ಟು ರಾಯಭಾರಿಯಾಗಿಸುವ ಅಗತ್ಯ ಇಲ್ಲ ಎಂದರು.