ಅಂತಾರಾಷ್ಟ್ರೀಯ ಯೋಗ ದಿನ- ಅರಮನೆಯಲ್ಲಿ ಯೋಗಾಭ್ಯಾಸ

| Published : Jun 16 2025, 06:38 AM IST

ಅಂತಾರಾಷ್ಟ್ರೀಯ ಯೋಗ ದಿನ- ಅರಮನೆಯಲ್ಲಿ ಯೋಗಾಭ್ಯಾಸ
Share this Article
  • FB
  • TW
  • Linkdin
  • Email

ಸಾರಾಂಶ

ಜೂ.21 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನದಂದು 15 ಸಾವಿರಕ್ಕೂ ಹೆಚ್ಚು ಯೋಗಪಟುಗಳನ್ನು ಸೇರಿಸಿ ಪ್ರದರ್ಶನ ಆಯೋಜಿಸುವುದಕ್ಕೆ ನಿರ್ಧರಿಸಲಾಗಿದ್ದು

ಕನ್ನಡಪ್ರಭ ವಾರ್ತೆ ಮೈಸೂರು

ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಭಾನುವಾರ ಅಂತಿಮ ಹಂತದ ಯೋಗಾಭ್ಯಾಸ ಜರುಗಿತು.

ಜಿಲ್ಲಾಡಳಿತ, ಜಿಪಂ, ಆಯುಷ್ ಇಲಾಖೆ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಯೋಗ ತಾಲೀಮಿನಲ್ಲಿ ಯೋಗ ಪಟುಗಳು, ಎನ್ ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಎಸ್‌ಎಸ್, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ 1 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.

ಜೂ.21 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನದಂದು 15 ಸಾವಿರಕ್ಕೂ ಹೆಚ್ಚು ಯೋಗಪಟುಗಳನ್ನು ಸೇರಿಸಿ ಪ್ರದರ್ಶನ ಆಯೋಜಿಸುವುದಕ್ಕೆ ನಿರ್ಧರಿಸಲಾಗಿದ್ದು, ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯೋಗ ತಾಲೀಮಿನ ಕಾರ್ಯಕ್ರಮದಲ್ಲಿ ಮೊದಲಿಗೆ ಯೋಗ ಪ್ರದರ್ಶನದ ಬಗ್ಗೆ ಮಾಹಿತಿ ನೀಡಲಾಯಿತು. ಪ್ರಾರ್ಥನೆ ನೆರವೇರಿದ ನಂತರ ನಾಲ್ಕು ನಿಮಿಷಗಳ ಕಾಲ ಚಲನೆಗೆ ಸಂಬಂಧಿಸಿದ ವ್ಯಾಯಾಮ ಮಾಡಿಸಲಾಯಿತು. ನಂತರ 25 ನಿಮಿಷ ಯೋಗಾಸನ ಮಾಡಲಾಯಿತು. ಬಳಿಕ 15 ನಿಮಿಷ ಪ್ರಾಣಾಯಮ, ಧ್ಯಾನ, ಸಂಕಲ್ಪ ಜರುಗಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ. ರೇಣುಕಾದೇವಿ ಮೊದಲಾದವರು ಇದ್ದರು.