ಸಾರಾಂಶ
ರೈತ ಸಂಘಕ್ಕೆ ಹೆಚ್ಚಿನ ರೈತರನ್ನು ಸದಸ್ಯರಾಗಿ ಮಾಡಿಕೊಳ್ಳುವುದರ ಜೊತೆಗೆ ಅವರನ್ನು ಬೌದ್ಧಿಕವಾಗಿ ರೂಪಿಸುವ ನಿಟ್ಟಿನಲ್ಲಿ ತೀರ್ಮಾನ
ಮೈಸೂರು
ಪ್ರತಿ ಗ್ರಾಮ ಮತ್ತು ಪ್ರತಿ ಮನೆಗಳಲ್ಲಿ ರೈತ ಕಾರ್ಯಕರ್ತರನ್ನು ಹುಟ್ಟು ಹಾಕಿ ಹೋರಾಟಕ್ಕೆ ಸಜ್ಜುಗೊಳಿಸಲು ಕರ್ನಾಟಕ ರಾಜ್ಯ ರೈತ ಸಂಘದ ಮೈಸೂರು ತಾಲೂಕು ಕಾರ್ಯಕರ್ತರ ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಹುಣಸೂರು ರಸ್ತೆಯಲ್ಲಿರುವ ಕೃಷಿ ಅಧ್ಯಯನ ಮಾರುಕಟ್ಟೆ ಸಂಸ್ಥೆಯ ಸಭಾಂಗಣದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ರೈತ ಸಂಘ ಮೈಸೂರು ತಾಲೂಕು ಪೂರ್ಣ ಕಾರ್ಯಕರ್ತರ ಸಭೆಯ ನಡೆಯಿತು. ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರ ಅಧ್ಯಕ್ಷತೆಯಲ್ಲಿ ರೈತ ಸಂಘದ ಮುಂದಿನ ಹೋರಾಟ ಮತ್ತು ಸಂಘಟನೆಯ ಬಗ್ಗೆ ಚರ್ಚಿಸಲಾಯಿತು. ರೈತ ಸಂಘಕ್ಕೆ ಹೆಚ್ಚಿನ ರೈತರನ್ನು ಸದಸ್ಯರಾಗಿ ಮಾಡಿಕೊಳ್ಳುವುದರ ಜೊತೆಗೆ ಅವರನ್ನು ಬೌದ್ಧಿಕವಾಗಿ ರೂಪಿಸುವ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಯಿತು.ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಹೇಶ್ ಪ್ರಭು, ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಮೈಸೂರು ತಾಲೂಕು ಅಧ್ಯಕ್ಷ ಆನಂದೂರ್ ಪ್ರಭಾಕರ್, ಪದಾಧಿಕಾರಿಗಳಾದ ರವಿ ಕಿರಣ್, ನಾಗನಹಳ್ಳಿ ವಿಜೇಂದ್ರ, ಮಂಡಕಳ್ಳಿ ಮಹೇಶ್, ಬೊಕ್ಕಳ್ಳಿ ನಂಜುಂಡಸ್ವಾಮಿ, ಪ್ರೇಮ್ ಕುಮಾರ್, ಸಾಲುಂಡಿ ಬಸವರಾಜು, ಮೈದನಹಳ್ಲಿ ಮಹೇಶ್ ಮೊದಲಾದವರು ಇದ್ದರು.