ಪ್ರತಿಭಾ ಪುರಸ್ಕಾರ ಮಕ್ಕಳ ಸಾಧನೆಗೆ ಪ್ರೇರಣೆ

| Published : May 22 2025, 12:45 AM IST

ಪ್ರತಿಭಾ ಪುರಸ್ಕಾರ ಮಕ್ಕಳ ಸಾಧನೆಗೆ ಪ್ರೇರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇತರೆ, ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ ಎಂದು ಶಾಸಕ ಕೆ. ಹರೀಶ್ ಗೌಡ ಹೇಳಿದರು.

ಮೈಸೂರು ಯುವ ಬಳಗದ ವತಿಯಿಂದ ಸುಬ್ಬರಾಯನ ಕೆರೆಯ 23ನೇ ವಾರ್ಡಿನ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.

ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ. ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ಅವರು ಹೇಳಿದರು.

ಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಛಲ, ಆಸಕ್ತಿಯೊಂದಿಗೆ ನಿಖರ ಗುರಿಗೆ ಮನಸ್ಸನ್ನು ಕೇಂದ್ರೀಕರಿಸಿಕೊಂಡ ಪರಿಶ್ರಮ ಹಾಕಬೇಕು. ಹಾಗಾದರೆ ತಕ್ಕೆ ಫಲ ದೊರೆಯುತ್ತಿದೆ ಎಂದು ಅವರು ತಿಳಿಸಿದರು.

ನಗರಪಾಲಿಕೆ ಮಾಜಿ ಸದಸ್ಯರಾದ ಗೋಪಿ, ಮೈಸೂರು ಟಾರ್ಪಲಿಯನ್ಸ್ ಮಾಲೀಕ ವೀರಭದ್ರಪ್ಪ, ದೇವರಾಜ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಜೈ ಕೀರ್ತಿ, ಸಮಾಜ ಸೇವಕಿ ಸ್ವಾತಿ, ಸ್ಥಳೀಯ ಮುಖಂಡರಾದ ಮಹಾದೇವ್, ಮಂಜುಳಾ, ಶಾಂತ, ಮಂಗಳ, ನವೀನ್, ಮಂಜುನಾಥ್, ಸಂದೀಪ್, ರವಿಚಂದ್ರ, ಲೋಕೇಶ್, ಹರ್ಷ, ಮನುನಾಯಕ್ ಇದ್ದರು.